ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಮಹದಾಯಿ ಜಲ ಜನ ಆಂದೋಲನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಸ್ ಹರಿದ ಪರಿಣಾಮ ಕಾರ್ಯಕರ್ತ ಸ್ಥಳದಲ್ಲಿಯೇಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಬಳಿ ನಡೆದಿದೆ.
ರಸ್ತೆ ಪಕ್ಕದಲ್ಲಿ ನಿಂತಿದ್ದ ಪಾದಚಾರಿಗಳ ಮೇಲೆ ಬಸ್ ಹರಿದು ಓರ್ವ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದು,ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ದುರ್ದೈವಿ ರಸ್ತೆಯಲ್ಲಿಯೇ ಸಾವನ್ನಪ್ಪಿದ್ದಾನೆ. ಅಪಘಾತ ಮಾಡಿ ಬಸ್ ಚಾಲಕ ಪರಾರಿಯಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …