ಮೃತರಿಗೆ ತಲಾ ಐದು ಲಕ್ಷ ಗಾಯಾಳಿಗೆ ಒಂದು ಲಕ್ಷ ಪರಿಹಾರ: ಕಿಮ್ಸ್ ಗೆ ಭೇಟಿ ನೀಡಿದ ಕೈ ಮುಖಂಡರು*

Spread the love

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದ್ದವರ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಹಿನ್ನಲೆಯಲ್ಲಿ ಮಾಜಿ ಸಚಿವ ಎಚ್.ಕೆ.ಪಾಟೀಲ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಧೈರ್ಯ ತುಂಬಿದ್ದು, ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.

ಹೌದು..ನಿಂಗಪ್ಪ ಮಣ್ಣಾಪುರ, ನಬೀಸಾಬ್ ನಾಗನೂರು ಮೃತ ದುರ್ದೈವಿಗಳಾಗಿದ್ದು, ಯಲ್ಲಪ್ಪ ಕರಿಗೌಡರ್‌ಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ರಸ್ತೆ ದಾಟುತ್ತಿದ್ದವರ ಮೇಲೆ ಹರಿದಿರುವ ಸಾರಿಗೆ ಸಂಸ್ಥೆಯ ಬಸ್ ಹರಿದಿದ್ದು, ಕೆಪಿಸಿಸಿಯಿಂದ ಮೃತರಿಗೆ ತಲಾ ಐದು ಲಕ್ಷ ಹಾಗೂ ಗಾಯಾಳುವಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಎನ್‌.ಎಚ್‌. ಕೋನರೆಡ್ಡಿ, ಜಿ.ಎಸ್. ಪಾಟೀಲ್, ಮಹೇಂದ್ರ ಸಿಂಘಿ ಉಪಸ್ಥಿತಿಯಲ್ಲಿ ಆರೋಗ್ಯ ವಿಚಾರಣೆ ಮಾಡಲಾಗಿದೆ.


Spread the love

About Karnataka Junction

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply