ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಗ್ರಾಮದಲ್ಲಿ ಮಂಗಳವಾರ ರಾತ್ರಿ ,8 ಕ್ಕೆ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಶ್ರದ್ಧಾಂಜಲಿಯನ್ನು ಗ್ರಾಮಸ್ಥರು ಸಲ್ಲಿಸಿದರು.
ಶ್ರೀ ಸಿದ್ಧೇಶ್ವರ ಭಾವಚಿತ್ರಕ್ಕೆ ಪೂಜೆ ಮಾಡಿ ನಮನ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಹುಬ್ಬಳ್ಳಿಯ ಗೋಕುಲ ಹಾಗೂ ನವಲಗುಂದ ತಾಲೂಕಿನ ಮೊರಬ ಹಾಗೂ ಧಾರವಾಡ ದಲ್ಲಿ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು ನೀಡಿದ ಪ್ರವಚನ ಅನೇಕ ಜನರನಲ್ಲಿ ಬದಲಾವಣೆಯನ್ನು ತಂದಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು.
ಗ್ರಾಮದ ಯುವಕರು, ರೈತರು ಹಾಗೂ ಹಿರಿಯರು ಇದ್ದರು
