Breaking News

ಅಭಿವೃದ್ಧಿಯಲ್ಲಿ ತಾರತಮ್ಯ ಆರೋಪ: ಶಾಸಕ ಅಬ್ಬಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

Spread the love

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರು, ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಹಾಗೂ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಹು-ಧಾ ಪೂರ್ವ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ಎದುರು ಹು-ಧಾ ಪೂರ್ವ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಪ್ರಭು ನವಲಗುಂದಮಠ ನೇತೃತ್ವದಲ್ಲಿ ಧರಣಿ ನಡೆಸಿದ ಅವರು, ಶಾಸಕರ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು.
‘ಶಾಸಕ ಪ್ರಸಾದ ಅಬ್ಬಯ್ಯ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಪಾಲಿಕೆಯಲ್ಲಿರುವ ತಮ್ಮ ಕಚೇರಿಯಲ್ಲಿ ಸಹೋದರನ ಮುಖಾಂತರ ಕಾಮಗಾರಿಯ ಕಮಿಷನ್ ವ್ಯವಹಾರ ನಡೆಸುತ್ತಿದ್ದಾರೆ. ಸೋನಿಯಾಗಾಂಧಿ ನಗರ, ಎಸ್.ಎಂ. ಕೃಷ್ಣನಗರದ ನಿವಾಸಿಗಳಿಗೆ ಬಿಜೆಪಿ ಶಾಸಕರು ಇದ್ದಾಗ ಆಶ್ರಯ ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ ಅವರಿಗೆ ಹಕ್ಕುಪತ್ರ ನೀಡಲು, ಏಜೆಂಟ್ ಮೂಲಕ ಹಣ ಪಡೆಯುತ್ತಿದ್ದಾರೆ’ ಎಂದು ಮುಖಂಡ ವೆಂಕಟೇಶ ಮೇಸ್ತ್ರಿ ಆರೋಪಿಸಿದರು.
ಚಂದ್ರಶೇಖರ ಗೋಕಾಕ ಮಾತನಾಡಿ, ‘ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ, ಒಳಚರಂಡಿ, ಗಟಾರದ ಅಭಿವೃದ್ಧಿ ಕಾಮಗಾರಿಗಳು ನಡೆದಿದ್ದು ಬಿಜೆಪಿ ಸರ್ಕಾರದಿಂದ. ಕೇಂದ್ರ‌ ಸರ್ಕಾರದ ಸ್ಮಾರ್ಟ್’ಸಿಟಿ ಯೋಜನೆಯಡಿ ಸಾಕಷ್ಟು ಕಾಮಗಾರಿಗಳು ಅಲ್ಲಿ ನಡೆದಿವೆ. ಇವುಗಳನ್ನೇ ಶಾಸಕ ಪ್ರಸಾದ ಅಬ್ಬಯ್ಯ ಅವರು, ತಾವೇ ಮಾಡಿಸಿದ್ದು ಎನ್ನುತ್ತಿದ್ದಾರೆ. ಚನ್ನಪೇಟೆ ಭಾಗದ ರಸ್ತೆ ಕಾಮಗಾರಿಗೆ ಟೆಂಡರ್ ಆಗಿದೆ. ಅಲ್ಲಿ ಬಿಜೆಪಿ ಕಾರ್ಯಕರ್ತರ ಸಂಖ್ಯೆ ಹೆಚ್ಚಿದೆ ಎಂದು ಕಾಮಗಾರಿಯನ್ನೇ ಸ್ಥಗಿತಗೊಳಿಸಿದ್ದಾರೆ. ಜನರನ್ನು ಜಾಗೃತಗೊಳಿಸಲು ಧರಣಿ ಹಮ್ಮಿಕೊಂಡಿದ್ದೇವೆ’ ಎಂದರು.
ಮುಖಂಡರಾದ ವೀರಭದ್ರಪ್ಪ ಹಾಲಹರವಿ, ರಂಗಾ ಬದ್ದಿ, ಶಿವು ಮೆಣಸಿನಕಾಯಿ, ಡಾ. ಕ್ರಾಂತಿಕಿರಣ, ಗಣೇಶ ಅಮರಾವತಿ, ಹುಧಾ ಪೂರ್ವ ವಕ್ತಾರ ಲಕ್ಷ್ಮೀಕಾಂತ ಘೋಡಕೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


Spread the love

About Karnataka Junction

[ajax_load_more]

Check Also

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ

Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …

Leave a Reply

error: Content is protected !!