ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ನ ನೂತನ ಉಪ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ರಾಜೀವ್ ರವರು ಭಾನುವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಉಪ ಪೊಲೀಸ್ ಆಯುಕ್ತರಾದ ಹಿರಿಯ ಐಪಿಎಸ್ ಅಧಿಕಾರಿ ಸಾಹಿಲ್ ಬಾಗ್ಲಾ ಅಧಿಕಾರ ಹಸ್ತಾಂತರಿಸಿದರು.
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಾಹಿಲ್ ಬಾಗ್ಲಾ ಅವರನ್ನು ರಾಜ್ಯ ಗುಪ್ತ ದಳ ಡಿಸಿಪಿಯನ್ನಾಗಿ ಮಾಡಲಾಗಿದೆ. ಇನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯನ್ನಾಗಿ ಬೆಳಗಾವಿ ಡಿಸಿಆರ್ ಎಸ್ಪಿ ಅಗಿದ್ದ ರಾಜೀವ್ ಎಂ ಅವರನ್ನು ನಿಯುಕ್ತಿ ಮಾಡಿ ಆದೇಶ ಹೊರಡಿಸಿತ್ತು.
