ಹುಬ್ಬಳ್ಳಿ: ‘ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗಿ ಆವಾಂತರ ಸೃಷ್ಟಿಸುತ್ತಿದ್ದ ರಾಜ ಕಾಲುವೆಗೆ ತಡೆಗೋಡೆ ನಿರ್ಮಾಣವಾಗಿರುವುದರಿಂದ ಈ ಭಾಗದ ಜನರು ನಿಟ್ಟುಸಿರು ಬಿಡುವಂತೆ ಮಾಡಲಾಗಿದೆ’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಇಂದಿರಾ ನಗರದ ರಾಜ ಕಾಲುವೆಗೆ ₹5 ಕೋಟಿ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
‘ಮಳೆ ಬಂದಾಗ ನಾಲಾಗೆ ಹೊಂದಿಕೊಂಡಿರುವ ಮನೆಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದನ್ನು ಕಣ್ಣಾರೆ ಕಂಡಿದ್ದೇನೆ. ಜನರ ಕಷ್ಟಗಳನ್ನು ಆಲಿಸಿದ್ದೇನೆ. ಅಂದು ಜನರಿಗೆ ನೀಡಿದ ಮಾತಿನಂತೆ ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಹೋರಾಡಿ, ಅಧಿವೇಶನದಲ್ಲೂ ಈ ಬಗ್ಗೆ ಧ್ವನಿ ಎತ್ತಿದ್ದೇನೆ. ಅದರ ಫಲವಾಗಿ ₹5 ಕೋಟಿ ಕಾಮಗಾರಿಗೆ ಚಾಲನೆ ನೀಡಲಾಗಿದೆ’ ಎಂದರು.
‘ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಉತ್ತಮ ಜೀವನ ನಡೆಸಬೇಕೆಂಬುದು ನಮ್ಮ ಗುರಿ. ಆ ನಿಟ್ಟಿನಲ್ಲಿ ಬಡವರು, ದೀನ–ದಲಿತರ ಬಡಾವಣೆ ಸೇರಿದಂತೆ ಕ್ಷೇತ್ರದಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನರ ಜೀವನ ಮಟ್ಟ ಸುಧಾರಿಸಲಾಗಿದೆ’ ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಸದಸ್ಯರಾದ ಹುಸೇನ್‌ಬಿ ನಾಲವತ್ವಾಡ, ಮುಖಂಡರಾದ ಬತುಲ್ ಕಿಲ್ಲೇದಾರ, ಗಂಗಾಧರ ಟಗರಗುಂಟಿ, ಪ್ರಸಾದ ಪೇರೂರು, ನಾಗೇಶ ಕತ್ರಿಮಲ್ಲ, ಶ್ರೀನಿವಾಸ ಸಾಂಬ್ರಾಣಿ, ಶ್ರೀನಿವಾಸ ರಾಮಗಿರಿ, ಗುರುನಾಥ ವಟ್ಟಪಲ್ಲಿ, ಬಾಬು ಬಳ್ಳಾರಿ, ಬಸವರಾಜ ವಟ್ಟಪಲ್ಲಿ, ನಾಗಾರ್ಜುನ ಕತ್ರಿಮಲ್ಲ, ರ‍್ರಮ್ಮ ಐವರಪಲ್ಲಿ ಇದ್ದರು.
Check Also
ಎಪಿಎಂಸಿಗೆ ಶಾಸಕ ಟೆಂಗಿನಕಾಯಿ ಭೇಟಿ, ವರ್ತಕರ ಸಮಸ್ಯೆ ಚರ್ಚೆ
Spread the loveಹುಬ್ಬಳ್ಳಿ: ಇಲ್ಲಿಯ ಅಮರಗೋಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಬುಧವಾರ ಭೇಟಿ ನೀಡಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ …