ಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ. ಈ ಸಂಸ್ಥೆ ಒಂದಿಲ್ಲೊಂದು ರೀತಿಯಲ್ಲಿ ಸಾಧನೆ ಮಾಡುತ್ತ ಬಂದಿದೆ. ಈಗ ಮತ್ತೊಂದು ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿಯೇ ದಾಖಲೆ ನಿರ್ಮಾಣ ಮಾಡಿದೆ.
ಇಂದು ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಬಂದಿದ್ದು, ಹುಬ್ಬಳ್ಳಿಯ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಇಡೀ ರಾಜ್ಯಕ್ಕೆ 3 ರ‌್ಯಾಂಕ್ ಬಂದಿದ್ದು, ಶಿಕ್ಷಣ ಸಂಸ್ಥೆ ಈಗ ದಾಖಲೆ ನಿರ್ಮಾಣ ಮಾಡಿದೆ. ಹೌದು..2022-23 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಸಾಯಿಸ್ ಗೋಣಿ 600 ಅಂಕಕ್ಕೆ 594 ಅಂಕ ಪಡೆದು ಇಡೀ ರಾಜ್ಯಕ್ಕೆ 3ನೇ ರ‌್ಯಾಂಕ್ ಮತ್ತು ಉತ್ತರ ಕರ್ನಾಟಕಕ್ಕೆ ಮೊದಲನೇ ರ‌್ಯಾಂಕ್ ಬಂದು ಧಾರವಾಡ ಜಿಲ್ಲೆಗೆ ಮತ್ತು ಶಾಲಾ ಆಡಳಿತ ಮಂಡಳಿ ಪೋಷಕರಲ್ಲಿ ಕೀರ್ತಿ ತಂದಿದ್ದಾನೆ.
ಇನ್ನೂ ಪಾಲಕರ ಬೆಂಬಲ, ಶಿಕ್ಷಕರ ಪ್ರೋತ್ಸಾಹದಿಂದಲೇ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಪಿಯು ವಿಜ್ಞಾನ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 3ನೇ ರ‍್ಯಾಂಕ್ ಗಳಿಸಿರುವ ಸಾಯೀಶ್ ಗೋಣಿ ಅಭಿಪ್ರಾಯ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಚೌಗಲಾ ಎಜ್ಯುಕೇಷನ್ ಸೊಸೈಟಿಯ ವಿದ್ಯಾನಿಕೇತನ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಇಂಗ್ಲಿಷ್-96, ಸಂಸ್ಕೃತ-100, ಭೌತವಿಜ್ಞಾನ-99, ರಸಾಯನವಿಜ್ಞಾನ-99, ಗಣಿತ-100, ಜೀವವಿಜ್ಞಾನ-100. ಒಟ್ಟು 594/600 ಅಂಕ ಪಡೆದಿದ್ದಾರೆ.
ಒಟ್ಟಿನಲ್ಲಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿದ್ದೆ. ರ‍್ಯಾಂಕ್ ಬರುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂಬುವಂತ ಮಾತನ್ನು ವಿದ್ಯಾರ್ಥಿ ವ್ಯಕ್ತಪಡಿಸಿದ್ದು, ಸಂತಸಗೊಂಡ ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿಗೆ ಗೌರವ ಧನ ನೀಡಿ ಸಿಹಿ ತಿನ್ನುಸುವ ಮೂಲಕ ಸಂತಸ ವ್ಯಕ್ತಪಡಿಸಿದರು.
Check Also
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ – ರಾಜಣ್ಣ ಕೊರವಿ
Spread the loveಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ ಆಗಿದೆ ಎಂದು ಶ್ರೀ …