Breaking News

ಅಭಿವೃದ್ಧಿ ಕಾರ್ಯಗಳಿಂದಲೇ ಜನರಿಗೆ ಅಭಾರಿಯಾದ ಜಲಾಧರೆಯ ಭಗಿರಥ

Spread the love

ಹುಬ್ಬಳ್ಳಿ: ಅಭಿವೃದ್ಧಿ ಹರಿಕಾರ, ನೀರಾವರಿ ಸೌಲಭ್ಯಗಳ ಮೂಲಕ ಛಾಪು ಮೂಡಿಸಿರುವ
ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಂಕರಪಾಟೀಲ ಮುನೇನಕೊಪ್ಪ ಅಬ್ಬರದ ಪ್ರಚಾರ ನಡೆಸಿದ್ದು ಎಲ್ಲೆಡೆಯಿಂದ ಅಭೂತಪೂರ್ವ ಬೆಂಬಲ ಸಿಗತಾ ಇದೆ‌. ಈಗಾಗಲೇ ಸಾಕಷ್ಟು ಜನಪರ ಕಾರ್ಯಗಳನ್ನು ಮಾಡಿರುವ ಜನನಾಯಕ ಶಂಕರಪಾಟೀಲ ಮುನೇನಕೊಪ್ಪಗೆ ಭರಪೂರ ಬೆಂಬಲ ವ್ಯಕ್ತವಾಗುತ್ತಿದೆ. ಜನರು ಆಶೀರ್ವಾದ ಮಾಡುವ ಮೂಲಕ ಮತ್ತೊಮ್ಮೆ ಅಧಿಕಾರ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ನನಗೆ ಪ್ಲಸ್‌ ಪಾಯಿಂಟ್‌ ಆಗಿದೆ. ಪ್ರಜ್ಞಾವಂತ ಮತದಾರರು ಬಿಜೆಪಿಯ ಕೈಬಿಡಲ್ಲ ಎನ್ನುವ ವಿಶ್ವಾಸವಿದೆ ಎಂಬುವಂತ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಮಹದಾಯಿ ಯೋಜನೆ ತರಲು ಹೋರಾಟ ನಡೆಸಿದವರಲ್ಲಿ ಶಂಕರಪಾಟೀಲ ಮುನೇನಕೊಪ್ಪ ಕೂಡ ಅಗ್ರಗಣ್ಯರು. ಈ ಭಾಗದ ಜನರಿಗೆ ನೀರಿನ ಅವಶ್ಯಕತೆ ಇದೆ. ಜಮೀನಿಗೆ ನೀರು ಹರಿಸಲು ರೈತರಿಗೂ ಅವಶ್ಯಕತೆ ಇದೆ. ಅದಕ್ಕಾಗಿ ನಾವು ಹೋರಾಟ ನಡೆಸಿದ್ದೇವು. ಆಗ ಭರವಸೆ ಕೊಟ್ಟಂತೆ ನಾವು ಮಹದಾಯಿ ಯೋಜನೆಗೆ ಕೇಂದ್ರದಿಂದ ಅನುಮೋದನೆ ತಂದಿದ್ದೇವೆ. ಟೆಂಡರ್ ಕೂಡ ಕರೆದಿದ್ದೇವೆ. ಇದರ ಜೊತೆಗೆ ಪ್ರತಿ ಗ್ರಾಮಗಳಲ್ಲಿ ಶಾಲೆ ತೆರೆಯಲು ಆದ್ಯತೆ ನೀಡಿದ್ದೇನೆ. ಜಲಮಿಷನ್‌ ಯೋಜನೆಯಡಿ ಮನೆಮನೆಗೆ ನೀರು ತಲುಪಿಸುವ ಕೆಲಸ ಮಾಡುತ್ತಿದ್ದೇನೆ. ಇವೆಲ್ಲ ಕಾರ್ಯಕ್ರಮಗಳನ್ನು ಇಟ್ಟುಕೊಂಡು ಮತಯಾಚಿಸುತ್ತಿದ್ದೇನೆ ಎಂಬುವಂತ ಮಾತನ್ನು ಹಂಚಿಕೊಂಡಿದ್ದಾರೆ.
ಟೆಕ್ಸ್‌ಟೈಲ್‌ ಪಾರ್ಕ್‌ ನಿರ್ಮಿಸಲು ಯೋಜನೆ ರೂಪಿಸಿದ್ದೇನೆ. ಅದಕ್ಕಾಗಿ 15 ಎಕರೆ ಜಮೀನು ಖರೀದಿಸಲಾಗಿದೆ. ಇದು ಪೂರ್ಣಗೊಂಡ ನಂತರ, ಸುಮಾರು 10 ಸಾವಿರ ಜನರಿಗೆ ಉದ್ಯೋಗಾವಕಾಶ ಸಿಗಲಿವೆ. ಇದಲ್ಲದೇ, ಈ ಕ್ಷೇತ್ರದಲ್ಲೊಂದು ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅಗತ್ಯ ಕ್ರಮಕೈಗೊಂಡಿದ್ದೇನೆ. ಆರಂಭಿಕ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಮುಖ್ಯ ಕಾಲುವೆಗಳನ್ನು ಪುನರ್‌ನಿರ್ಮಿಸಲಾಗಿದೆ. ಕಾಲುವೆಯ ಕೊನೆಯ ಭಾಗದ (ಟೇಲ್‌ಎಂಡ್‌) ಹೊಲಗಳಿಗೆ ನೀರು ಹಾಯಿಸಲು ಏತನೀರಾವರಿ ಯೋಜನೆ ಪೂರ್ಣಗೊಳಿಸಿದ್ದೇನೆ. ಇದರಿಂದ ಸುಮಾರು 10 ಸಾವಿರ ಎಕರೆ ಜಮೀನುಗಳಿಗೆ ನೀರು ಸಿಗುತ್ತಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ನವಿಲುತೀರ್ಥ ಜಲಾಶಯದಿಂದ ಸೈದಾಪುರ ಗ್ರಾಮಕ್ಕೆ ನೀರು ತರಲು ಪೈಪ್‌ ಅಳವಡಿಸುವ ಯೋಜನೆ ರೂಪಿಸಿದ್ದೇನೆ. ಮುಂಬರುವ ದಿನಗಳಲ್ಲಿ ಪೂರ್ಣಗೊಳಿಸಲಾಗುವುದು. ಗ್ರಾಮದ ಪ್ರತಿ ಮನೆಗೆ ನೀರು ತಲುಪಲಿದೆ. ತುಪ್ಪರಿ ಹಳ್ಳ ಪ್ರವಾಹ ನಿಯಂತ್ರಣ ಯೋಜನೆ ರೂಪಿಸಿದ್ದೇನೆ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.


Spread the love

About Karnataka Junction

[ajax_load_more]

Check Also

ರಾಜ್ಯ ಬಜೆಟ್ ಮಂಡನೆಗೆ ಸಲಹೆ ಗಳು

Spread the love ಹುಬ್ಬಳ್ಳಿ: ಈ ರಾಜ್ಯದ ಮುಖ್ಯ ಮಂತ್ರಿ ಯಾಗಿ ಹಣಕಾಸು ಸಚಿವ ರಾಗಿ ಈ ಬಾರಿ 16 …

Leave a Reply

error: Content is protected !!