ಹುಬ್ಬಳ್ಳಿ: ಬಿಜೆಪಿ ಸರ್ಕಾರದಿಂದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆಯಾಗುತಿದ್ದು ಇದರ ಉಳಿವಿಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲೇಬೇಕಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹೇಳಿದರು.
ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.
ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ವಿನಯ್ ಕುಲಕರ್ಣಿ ಅವರೇ ನಾಯಕರಾಗಿ ಬರಬೇಕಿದೆ. ಇಂದು ಕ್ಷೇತ್ರದಲ್ಲಿ ಪ್ರತಿಯೊಬ್ಬರೂ ನಾನು ವಿನಯ್ ಕುಲಕರ್ಣಿ ಎಂದು ತಿಳಿದು ಚುನಾವಣೆ ಮಾಡಲಾಗುತ್ತಿದ್ದು, ಇದಕ್ಕೆ ನಮ್ಮ ಇಡೀ ಕುಟುಂಬ ಸದಾ ಚಿರಋಣಿಯಾಗಿರುತ್ತದೆ ಎಂದರು.
ಕಾಂಗ್ರೆಸ್ ಮುಖಂಡ ತವನಪ್ಪ ಅಷ್ಟಗಿ ಮಾತನಾಡಿ, ರಾಜ್ಯದಲ್ಲಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬಡವರ ಪರ ಯಾವುದೇ ಯೋಜನೆಗಳನ್ನು ಜಾರಿಗೆ ತರದೇ ಕೇವಲ ಶ್ರೀಮಂತರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಇಲ್ಲಿನ ಶಾಸಕರ ಐದು ವರ್ಷಗಳ ದುರಾಡಳಿತಕ್ಕೆ ಈಗಾಗಲೇ ಜನ ಬೇಸತ್ತಿದ್ದಾರೆ. ಈ ಬಾರಿ ವಿನಯ್ ಕುಲಕರ್ಣಿ ಅವರು 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದರು.
ಸಮಾವೇಶದಲ್ಲಿ ನೂರಾರು ಜನ ಪಾಲ್ಗೊಂಡು ವಿನಯ್ ಕುಲಕರ್ಣಿ ಅವರಿಗೆ ಜಯಘೋಷ ಹಾಕಿದರು. ಕಲ್ಲಪ್ಪ ಪುಡಕಲಕಟ್ಟಿ, ಬಾಬಾ ಮೊಯುದ್ದೀಮ್ ಚೌಧರಿ, ಈಶ್ವರ ಶಿವಳ್ಳಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …