ಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ)ದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.
ಸವಾಯಿ ಗಂಧರ್ವ ಸಭಾಭವನದಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ನೇಮಕಾತಿಯು ಪಾರದರ್ಶಕವಾಗಿ ನಡೆಯುತ್ತದೆ. ಆದರೆ, ಕೆಪಿಎಸ್ಸಿ ನೇಮಕಾತಿಯು ಹಗರಣವಿಲ್ಲದೇ ನಡೆಯುವುದಿಲ್ಲ ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದರು. ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಸುಳ್ಳ ಪಂಚಗ್ರಹ ಹಿರೇಮಠ ಶ್ರೀ ಅಭಿನವ ಶಿವಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಯುಪಿಎಸ್ಸಿ ಪರೀಕ್ಷೆಯಲ್ಲಿ 362ನೇ ರ್ಯಾಂಕ್ ಪಡೆದ ಶೃತಿ ಯರಗಟ್ಟಿ, ಮಾನವ ಕಂಪ್ಯೂಟರ್ ಖ್ಯಾತಿಯ ಅಂಧ ಪ್ರತಿಭೆ ಬಸವರಾಜ ಉಮಾರಾಣಿ, ಶೂಟಿಂಗ್ ಪ್ರತಿಭೆ ಐಶ್ವರ್ಯ ಬಾಲೇಹೊಸೂರು, ರೋಪ್ ಸ್ಕಿಪ್ಪಿಂಗ್ ಪ್ರತಿಭೆ ಐಶ್ವರ್ಯ ಹುಬ್ಬಳ್ಳಿಮಠ ಅವರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. 95ಕ್ಕಿಂತ ಹೆಚ್ಚು ಅಂಕ ಗಳಿಸಿದ ಆದಿತ್ಯ ಮಂಡ್ಯಾಳ ಸೇರಿದಂತೆ 64 ಪ್ರತಿಭಾವಂತರನ್ನು ಪುರಸ್ಕರಿಸಲಾಯಿತು.
ಧಾರವಾಡ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ವೀರಣ್ಣ ಕಲ್ಲೂರ, ವಿಜಯಕುಮಾರ ಶೆಟ್ಟರ್, ಇತರರು ಇದ್ದರು.
ಧಾರವಾಡ ಜಿಲ್ಲಾ ವೀರಶೈವ ಲಿಂಗಾಯತ ಸಂಘಟನೆ ಅಧ್ಯಕ್ಷ ಪ್ರಕಾಶ ಬೆಂಡಿಗೇರಿ ಸ್ವಾಗತಿಸಿದರು. ಪ್ರತಿಭಾ ಪುರಸ್ಕಾರ ಸಮಿತಿ ಸಂಚಾಲಕ ಮಲ್ಲಿಕಾರ್ಜುನ ಸಾವಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …