ಹುಬ್ಬಳ್ಳಿ: ನಗರದ ಪ್ರತಿಷ್ಠಿತ
ಆಕಾಶ್ ಬೈಜೂಸ್ನ ಬಹು ನಿರೀಕ್ಷಿತ ರಾಷ್ಟ್ರೀಯ ಟ್ಯಾಲೆಂಟ್ ಹಂಟ್ ಪರೀಕ್ಷೆ (ಅಂಥೆ) ಅಕ್ಟೋಬರ್ 7ರಿಂದ 15ರವರೆಗೆ ನಡೆಯಲಿದೆ ಎಂದು ಸಂಸ್ಥೆಯ ಹಿರಿಯ ಸಹಾಯಕ ನಿರ್ದೇಶಕ ನಾಗೇಂದ್ರಕುಮಾರ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನೋಂದಣಿ ಪ್ರಾರಂಭವಾಗಿದ್ದು, ದೇಶಾದ್ಯಂತ 45 ಸಾವಿರ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಆಫ್ಲೈನ್ ಅಥವಾ ಆನ್ಲೈನ್ ಮೂಲಕವು ಹೆಸರು ನೋಂದಾಯಿ ಸಬಹುದಾಗಿದೆ. ಆನ್ಲೈನ್ನಲ್ಲಿ ಪರೀಕ್ಷೆಗೆ ಶುಲ್ಕ ಇರುವುದಿಲ್ಲ. ಆಫ್ಲೈನ್ನಲ್ಲಿ ಪರೀಕ್ಷೆ ಬರೆಯುವುದಾದರೆ 100 ರೂ. ಶುಲ್ಕ ಪಾವತಿಸಬೇಕು ಎಂದು ಹೇಳಿದರು.
7ನೇ ತರಗತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬಹುದು. ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವವರಿಗೆ ನೀಟ್, ಜೆಇಇ, ಸಿಇಟಿ, ಎನ್ಟಿಎಸ್ಇ ಮತ್ತು ಒಲಂಪಿಯಾಡ್ನಂಥ ಸ್ಪರ್ಧಾತ್ಮಕ ಪರೀಕ್ಷೆಗೆ ಆಕಾಸ್ ಬೈಜೂಸ್ನಲ್ಲಿ ಹೆಸರು ನೋಂದಾಯಿಸಿಕೊಂಡಲ್ಲಿ ಶೇ. 100ರವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು. ಅಗ್ರ-100 ವಿದ್ಯಾರ್ಥಿಗಳನ್ನು ವೈಜ್ಞಾನಿಕ ಪ್ರವಾಸಕ್ಕೆ ಆಯ್ಕೆ ಮಾಡಲಾಗುವುದು. 700 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು. ಸೆಂಟರ್ ದಿಂದ 90 ವಿದ್ಯಾರ್ಥಿಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನ ಉಚಿತವಾಗಿ ನಾಶಾಕ್ಕೆ ಅಧ್ಯಯನಕ್ಕೆ ಕರೆದುಕೊಂಡು ಹೋಗುವ ಜೊತೆಗೆ ವಿದ್ಯಾರ್ಥಿ ವೇತನ ಸಹ ನೀಡುವ ಉದ್ದೇಶ ಹೊಂದಲಾಗಿದೆ ಎಂದರು.
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …