ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್‌ನ ನೂತನ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಅವರು
ನಗರದ ವಿಮಾನ ನಿಲ್ದಾಣಕ್ಕೆ ಬುಧವಾರ ರಾತ್ರಿ ಆಗಮಿಸಿದರು.
ಹಂಗಾಮಿ ಕಮೀಷನರ್ ಆಗಿದ್ದ ಸಂತೋಷ ಬಾಬು ಅವರ ಸ್ಥಾನಕ್ಕೆ ಇಂದು ನಿಯುಕ್ತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ನಾಳೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕಾರ ಮಾಲಿರುವ ರೇಣುಕಾ ಸುಕುಮಾರ್ ಅವರು2011 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು ಈ ಹಿಂದೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ರೇಣುಕಾ ಅವರು ಹುಬ್ಬಳ್ಳಿ ಧಾರವಾಡ ಕಮಿಷನರೇಟ್ ನ ಮೊದಲ ಮಹಿಳಾ ಪೊಲೀಸ್ ಕಮಿಷನರ್ ಆಗಿದ್ದಾರೆ.
