ಹುಬ್ಬಳ್ಳಿ:ಸಕ್ಷಮ ಉತ್ತರ ಕರ್ನಾಟಕ ಪ್ರಾಂತ್ ವತಿಯಿಂದ ‘ಸಕ್ಷಮ್ ಉತ್ತರ ಕರ್ನಾಟಕ ಪ್ರಾಂತ ಅಧಿವೇಶನವನ್ನು’ ನಗರದ ಹೊಸೂರಿನ ಕನ್ನಡ ವೈಶ್ಯ ಸಮಾಜದ ಸಭಾಂಗಣದಲ್ಲಿ ಫೆ.೪ ರಂದು ಬೆ.೯.೩೦ ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಕ್ಷಮ ಉತ್ತರ ಕರ್ನಾಟಕ ಕಾರ್ಯದರ್ಶಿ ಡಾ. ಸುಭಾಸ ಬಬ್ರುವಾಡ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಅಂದಿನ ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್, ಅಧ್ಯಕ್ಷತೆಯನ್ನು ಸಕ್ಷಮ್ ಉತ್ತರ ಕರ್ನಾಟಕ ಪ್ರಾಂತ್ ಅಧ್ಯಕ್ಷರಾದ ಸಿಎ. ಎಸ್.ಬಿ. ಶೆಟ್ಟಿ ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಸಕ್ಷಮ್ ರಾಷ್ಟ್ರೀಯ ಅಧ್ಯಕ್ಷರಾದ ಗೋವಿಂದ್ ರಾಜ್, ಆರ್.ಎಸ್.ಎಸ್ ಕರ್ನಾಟಕ ಉತ್ತರ ಪ್ರಾಂತದ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಧರ ನಾಡಗೇರ್, ವಿನೋದ್ ಪ್ರಕಾಶ್, ದೀಪಾ ಪಳನಿಯಪ್ಪನ್, ಜಗದೀಶ್ ಕೆ, ಪ್ರಸನ್ನ ಕೆ, ಪ್ರಸನ್ನ ಶಂಕರ್ ಶೆಟ್ಟಿ ಸೇರಿದಂತೆ ಮೊದಲಾದವರು ಆಗಮಿಸಲಿದ್ದಾರೆ ಎಂದರು.
- ಅಂದು ಮಧ್ಯಾಹ್ನ ೨ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ, ಮಜೇಥಿಯಾ ಫೌಂಡೇಶನ್ ಅಧ್ಯಕ್ಷರಾದ ಜಿತೇಂದ್ರ ಮಜೇಥಿಯಾ, ಸುಹಾಸ ಬೋನಗೆರಿ ಉಪಸ್ಥಿತಿ ಇರಲಿದ್ದಾರೆಂದರು.
ಸುದ್ದಿಗೋಷ್ಠಿಯಲ್ಲಿ ಸಕ್ಷಮ್ ರಾಷ್ಟ್ರೀಯ ಅಧ್ಯಕ್ಷ ಗೋವಿಂದರಾಜ್, ಸುನೀಲ್ ಗೋಖಲೆ ,ಉತ್ತರ ಕರ್ನಾಟಕ ಪ್ರಾಂತದ ಅಧ್ಯಕ್ಷರಾದ ಸಿಎ. ಎಸ್.ಬಿ.ಶೆಟ್ಟಿ ಉಪಸ್ಥಿತರಿದ್ದರು.