ಹುಧಾ ಅವಳಿನಗರದ ಸ್ವಚ್ಚತೆ ಆಗ್ರಹಿಸಿ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ
ನಗರವನ್ನು ಸ್ವಚ್ಛವಾಗಿಡುವಲ್ಲಿ ಮಹಾನಗರ ಪಾಲಿಕೆ ಆಡಳಿತ ಸಂಪೂರ್ಣ ವಿಲವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇದೆ ಎಂದು ಆರೋಪಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಎದುರು ಅಖಿಲ್ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳವಾರ ಪ್ರತಿಭಟಿಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ 82ವಾ ರ್ಡ್ ಗಳಲ್ಲಿ ಅನೈರ್ಮಲ್ಯ ತಾಂಡವಾಡುತ್ತಿದ್ದು, ಬಡಾವಣೆಯ ರಸ್ತೆಗಳಲ್ಲಿ ತ್ಯಾಜ್ಯಗಳು ಅಲ್ಲಲ್ಲಿ ಸಂಗ್ರಹವಾಗಿದ್ದು, ಸ್ವಚ್ಛ ಮಾಡುವಂತೆ ನಗರಸಭೆಗೆ ಅನೇಕ ಬಾರಿ ಬಡಾವಣೆಯ ಜನತೆ ಲಿಖಿತ ರೂಪದಲ್ಲಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲಘ ಎಂದು ಕಿಡಿಕಾಡಿದರು. ಬಡಾವಣೆಯಲ್ಲಿರುವ ಅನೇಕ ಸರಕಾರಿ ಶಾಲೆಯ ಕಾಂಪೌಂಡ್‌ಗೆ ಹೊಂದಿಕೊಂಡಂತೆ ತ್ಯಾಜ್ಯ ಸಂಗ್ರಹವಾಗಿದೆ. ಕನಿಷ್ಠ ಮಕ್ಕಳ ಆರೋಗ್ಯದ ದಷ್ಟಿಯಿಂದಾದರೂ ಈ ತ್ಯಾಜ್ಯವನ್ನಾದರೂ ವಿಲೇವಾರಿ ಮಾಡಿ ಎಂದು ಮನವಿ ಮಾಡಿದರೂ ನಗರಸಭೆ ಸಿಬ್ಬಂದಿ, ಜನಪ್ರತಿನಿಗಳು ಕ್ರಮ ಕೈಗೊಳ್ಳದ ಕಾರಣ ಅನಿವಾರ್ಯವಾಗಿ ಪ್ರತಿಭಟನೆಯ ಹಾದಿಯನ್ನು ಹಿಡಿಯಬೇಕಾಗಿದೆ ಎಂದು ಎಚ್ಚರಿಕೆ ನೀಡಿದರು.
ಇನ್ನು ಸರಿಯಾಗಿ ರಸ್ತೆ ಇಲ್ಲ. ಸ್ಮಾರ್ಟ್ ಸಿಟಿ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಕೈಗೊಂಡ ಕಾಮಗಾರಿಗಳು ಅಪೂರ್ಣ ಆಗಿವೆ. ಇದರಿಂದಾಗಿ ಸಾರ್ವಜನಿಕರಿಗೆ ತೀವ್ರ ಸ್ವರೂಪದ ತೊಂದರೆ ಆಗಿದೆ. ಆದ್ದರಿಂದ ಇದೇ ರೀತಿ ನಿರ್ಲಕ್ಷ್ಯ ಮುಂದುವರಿದರೆ ಉಗ್ರ ಸ್ವರೂಪದ ಹೋರಾಟ ನಡೆಸುವ ಎಚ್ಚರಿಕೆಯನ್ನು ಎಬಿವಿಪಿ ನಾಯಕರು ಎಚ್ಚರಿಕೆ ನೀಡಿದರು.
ನಂತರ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ
ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.