ಸಿದ್ದರಾಮಯ್ಯವರೇ ನಿಮಗೆ ಮಾನ ಮರ್ಯಾದೆ ಇಲ್ಲ. ಹಾಗಂತ ಬೇರೆಯವರಿಗೂ ಇಲ್ವಾ- ಜೋಶಿ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇಲ್ಲ. ಹಾಗಂತ ಬೇರೆಯವರಿಗೂ ಇಲ್ಲ ಎಂದು ಸಿದ್ದರಾಮಯ್ಯ ಭಾವಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು.
ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನವಲಗುಂದದ ಕಾಂಗ್ರೆಸ್ ಕಾರ್ಯಕ್ರಮದ ಭಾಷಣದಲ್ಲಿ ತಮ್ಮ ವಿರುದ್ಧ ಏಕ ವಚನದಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.
ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ. ನೀವು ಹೇಗೆ ಪ್ರಮಾಣವಚನ ಸ್ವೀಕರಿಸಿದದ್ದಿರಿ ಹಾಗೆಯೇ ನಾನು ಕೂಡ ಪ್ರಮಾಣವಚನ ಸ್ವೀಕಾರ ಮಾಡಿರುವೆ. ಆಡಳಿತ, ಅಧಿಕಾರ ನಿಮಗೆ ಜಾಸ್ತಿ ಇರಬಹುದು. ಆದರೆ, ಸಂವಿಧಾನದಲ್ಲಿ ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಸಮಾನರು. ನಾನು ಮಾನ ಮರ್ಯಾದೆ ಬಿಟ್ಟು ವರ್ತನೆ ಮಾಡುವುದಿಲ್ಲ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಯಾವುದೇ ಪೂರ್ವಾಪರ ತಿಳಿದುಕೊಳ್ಳದೇ ಉಡಾಫೆ ಹೊಡಿತಾರೆ. ಕಾಂಗ್ರೆಸ್ ಎಲ್ಲ ಸಂದರ್ಭದಲ್ಲಿ ಕಳಸಾ ಬಂಡೂರಿ ಯೋಜನೆಗೆ ತೊಡಕುಂಟು ಮಾಡುದೆ. ಸೋನಿಯ ಗಾಂಧಿ ಅವರು ಗೋವಾಕ್ಕೆ ಹೋಗಿ ಹನಿ ನೀರು ಕೊಡಲ್ಲ ಎಂದಿದ್ದರು.
ಇವರಿಗೆ ಎಷ್ಟು ನಾಲಿಗೆ ಇದೆ ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್
ವಿವೇಚನ ರಹಿತವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಿಟಿ ರವಿ ಮತ್ತು ಶೋಭಾ ಕರಂದ್ಲಾಜೆ ಗೋ ಬ್ಯಾಕ್ ವಿಚಾರ, ಕಾಂಗ್ರೆಸ್ ಸ್ವಂತ ಬಲ ಮತ್ತು ಅಭಿವೃದ್ಧಿಯಿಂದ ಗೆಲ್ಲುವುದಿಲ್ಲ. ಆದ್ದರಿಂದ ಈ ರೀತಿಯ ಹೇಳಿಕೆ ನೀಡುತ್ತಿದೆ.
ಕಾಂಗ್ರೆಸ್ ಪಾರ್ಟಿ ಷಡ್ಯಂತರಕ್ಕೆ ಜನ ಬಲಿಯಾಗುವುದಿಲ್ಲ ಎಂದರು.
ಮಂಡ್ಯ ಸುಮಲತಾ ವಿಚಾರವಾಗಿ ಮಾತನಾಡಿ, ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೆವೆ. ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿದ್ದೇನೆ.
ಒಂದು ಮನೆಯಿಂದ ಒಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ.
ದೊಡ್ಡ ಪಾರ್ಟಿಗಳು, ದೊಡ್ಡ ವ್ಯವಸ್ಥೆ ಕೋಟ್ಯಾಂತರ ಜನ, ಲಕ್ಷಾಂತರ ಜನ ಹೊಂದಾಣಿಕೆಗೆ ಸಮಯಬೇಕು. ಕುಮಾರಸ್ವಾಮಿ ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದರು.
ನಿರ್ಮಲ ಸೀತಾರಾಮ್ ಲೋಕಸಭೆಗೆ ಸ್ಪರ್ಧೆ ಮಾಡೋದು ನಿಶ್ಚಿತ. ಆದರೆ, ಯಾವ ರಾಜ್ಯದಿಂದ ಸ್ಫರ್ಧೆ ಮಾಡತ್ತಾರೆ ಎಂಬುದು ಇನ್ನೂ ತೀರ್ಮಾನ ಆಗಿಲ್ಲ ಎಂದರು.