ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಕಿಡಿ
ಹುಬ್ಬಳ್ಳಿ: ಸಮುದ್ರದ ಆಳದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಕಿಡಿ ಕಾರಿದ್ದಾರೆ.
ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಧರ್ಮ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಇಡೀ ದೇಶ ಆರಾಧನೆ ಮಾಡುವಂಥ ಪವಿತ್ರ ಸ್ಥಳಗಳನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ. ಹೀಗಿರುವಾಗ ಮಲ್ಲಿಕಾರ್ಜುನ ಖರ್ಗೆ ಅವರ ಟೀಕೆಗೆ ಅರ್ಥವೇ ಇಲ್ಲ ಎಂದರು.
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಫಲಿತಾಂಶದ ನಂತರ ಅದು ಗೊತ್ತಾಗುತ್ತದೆ.
ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.
ಫಲಿತಾಂಶ ಬರೋವರೆಗೂ ಏನು ಹೇಳೋಕೆ ಆಗಲ್ಲ.
ಕುದುರೆ ವ್ಯಾಪಾರವೊ ಏನೋ ನನಗೆ ಗೊತ್ತಿಲ್ಲ ಎಂದರು.
ಮನೋಹರ್ ಪರಿಕರ ಸಿಎಂ ಇದ್ದಾಗ ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಿದೆ.
ಮನೋಹರ್ ಪರಿಕರ್ ಮನವೊಲಿಕೆ ಸಹ ಆಗಿತ್ತು.
ಆದರೆ ಆ ವೇಳೆ ಗೋವಾ ಕಾಂಗ್ರೆಸ್ ನವರೇ ವಿರೋಧ ಮಾಡಿದ್ದರು. ಅಲ್ಲಿನ ಕಾಂಗ್ರೆಸ್ ನಾಯಕರಿಗೆ ತಿರುಗೋಕೆ ಕೊಡಿ ಅಂತ ಕರ್ನಾಟಕ ಕಾಂಗ್ರೆಸ್ ನಾಯಕರಿಗೂ ಹೇಳಿದ್ದೆ.
ಕೆಲವರಿಂದಾಗಿ ಇದು ವಿಳಂಬವಾಗುತ್ತಿದ್ದು, ಅದನ್ನು ಸರಿ ಮಾಡೋ ಕೆಲಸ ಮಾಡ್ತೀವಿ .
ಕೇಂದ್ರ ಸಚಿವ ನಿರ್ಮಲ ಸೀತಾರಾಮನ್ ಮತ್ತು ಜೈ ಶಂಕರ್ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ
ಅವರು ಸದ್ಯ ರಾಜ್ಯಸಭೆ ಸದಸ್ಯರಿಲ್ಲ
ಹೀಗಾಗಿ ಲೋಕಸಭೆಗೆ ಸ್ಪರ್ಧಿಸಬಹುದು
ಆದರೆ ಕರ್ನಾಟಕದಿಂದಲೇ ಸ್ಪರ್ಧಿಸುತ್ತಾರೆ ಅಂತ ಹೇಳೋಕೆ ಬರಲ್ಲ
ಬೇರೆ ರಾಜ್ಯದಿಂದಲೂ ಸ್ಪರ್ಧಿಸಬಹುದು ಎಂದರು.