ಸಚಿವ ಪ್ರಹ್ಲಾದ ಜೋಶಿ ಅವರಿಂದ ಶಿವಲಿಂಗಕ್ಕೆ ರುದ್ರಾಭಿಷೇಕ

Spread the love

ಸಚಿವ ಪ್ರಹ್ಲಾದ ಜೋಶಿ ಅವರಿಂದ ಶಿವಲಿಂಗಕ್ಕೆ ರುದ್ರಾಭಿಷೇಕ

ಹುಬ್ಬಳ್ಳಿಯಲ್ಲಿ ಮಹಾಶಿವರಾತ್ರಿಗೆ ಅಯೋಧ್ಯೆ ಮಾದರಿ ರಾಮೇಶ್ವರ ದರ್ಶನದ ಮೆರುಗು

ಹುಬ್ಬಳ್ಳಿ: ಮಹಾಶಿವರಾತ್ರಿ ಪ್ರಯುಕ್ತ ಹುಬ್ಬಳ್ಳಿಯ ಜಿಮ್ ಖಾನ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಪಾಲ್ಗೊಂಡು ಶಿವಲಿಂಗಕ್ಕೆ ವಿಶೇಷ ಪೂಜೆ ನೆರವೇರಿಸಿದರು.

ಸಚಿವ ಜೋಶಿ ಅವರು ಇಂದು ಬೆಳಗ್ಗೆಯೇ ಮಹಾಶಿವನಿಗೆ ರುದ್ರಾಭಿಷೇಕ ನೆರವೇರಿಸುವ ಮೂಲಕ ಭಕ್ತಿ ಸಮರ್ಪಿಸಿದರು.

ವಾಣಿಜ್ಯ ನಗರಿಯ ಜಿಮ್ ಖಾನ ಮೈದಾನದಲ್ಲಿ ಪ್ರಹ್ಲಾದ ಜೋಶಿ ಅವರ ಸಾರಥ್ಯದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಈ ವರ್ಷ ಹುಬ್ಬಳ್ಳಿ -ಧಾರವಾಡ ಅವಳಿ ನಗರದ ಭಕ್ತರಿಗೆ ಇಲ್ಲಿ ಅಯೋಧ್ಯೆ ಮಾದರಿಯಲ್ಲಿ ಶ್ರೀ ರಾಮೇಶ್ವರ ದರ್ಶನ ಭಾಗ್ಯ ಕಲ್ಪಿಸಿರುವುದು ಮಹಾಶಿವರಾತ್ರಿ ಆಚರಣೆಗೆ ಇನ್ನಷ್ಟು ಮೆರುಗು ನೀಡಿದೆ.

ಶಿವಲಿಂಗಕ್ಕೆ ರುದ್ರಾಭಿಷೇಕ ಸಲ್ಲಿಕೆ ಕಾರ್ಯಕ್ರಮದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ, ಹು-ಧಾ ನಗರಪಾಲಿಕೆ ಮಹಾ ಪೌರರಾದ ಶ್ರೀಮತಿ ವೀಣಾ ಭಾರದ್ವಾಡ ಮತ್ತು ಪಾಲಿಕೆ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಭಕ್ತ ಸಮೂಹದ ಉಪಸ್ಥಿತಿ ಇತ್ತು.


Spread the love

Leave a Reply

error: Content is protected !!