ಬೈಕ್‌ಗೆ ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು,ಸ್ಥಳೀಯರ ಆಕ್ರೋಶ
ಹುಬ್ಬಳ್ಳಿ: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಕುಸುಗಲ್ ಗ್ರಾಮದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.
ಬೈಕ್ ಸವಾರ ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಗ್ರಾಮದ ರಾಜೇಸಾಬ್ ಕೊಲ್ಯಾಡಿ (24) ಮೃತ ದುರ್ದೈವಿ ಆಗಿದ್ದಾನೆ.
ಬೈಕ್ ಸವಾರ ಹಿಂಬದಿ ಕುಳಿತಿದ್ದ ಮಹಿಳೆಗೆ ಗಂಭೀರ ಗಾಯ ಆಗಿದ್ದು ಬೈಕ್ ಟ್ಯಾಂಕ್ ಮೇಲೆ ಕುಳಿತಿದ್ದ 12 ವರ್ಷದ ಬಾಲಕ ಅದೃಷ್ಟವಶಾತ್ ಪಾರು ಆಗಿದ್ದಾನೆ. ಸಾರಾಯಿ
ಕುಡಿದ ಮತ್ತಿನಲ್ಲಿ ಟಿಪ್ಪರ್ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದಾನೆಂಬ ಮಾಹಿತಿ ಲಭ್ಯವಾಗಿದೆ. ರೊಚ್ಚಿಗೆದ್ದ ಸ್ಥಳೀಯರು ಟಿಪ್ಪರ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿಯೇ ಇದ್ದ ಗ್ರಾಮಸ್ಥರು ಗಾಯಾಳು ಮಹಿಳೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.