85,000 ಕೋಟಿ ರೂಗಳ ಯೋಜನೆಗಳಿಗೆ ಆನ್ ಲೈನ್ ಮೂಲಕ ಪ್ರಧಾನಿ ಮೋದಿ ಚಾಲನೆ ನಾಳೆ

Spread the love

85,000 ಕೋಟಿ ರೂಗಳ ಯೋಜನೆಗಳಿಗೆ ಆನ್ ಲೈನ್ ಮೂಲಕ ಪ್ರಧಾನಿ ಮೋದಿ ಚಾಲನೆ ನಾಳೆ

ಹುಬ್ಬಳ್ಳಿ : ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ 85,000 ಕೋಟಿ ರೂಗಳ ಯೋಜನೆಗಳಿಗೆ ಆನ್ ಲೈನ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾ. 12ರಂದು ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸಚಿವಪ್ರಲ್ಲಾದ ಜೋಶಿ, ಈ ಪೈಕಿ ಕೆಲವು ಉದ್ಘಾಟನೆ ಹಾಗೂ ಇನ್ನುಳಿದ ಹಲವು ಯೋಜನೆಗಳು ಶಂಕುಸ್ಥಾಪನೆಗೊಳ್ಳಲಿವೆ. ನೈಋತ್ಯ ರೈಲ್ವೆ ವಲಯದಲ್ಲಿ ಒಟ್ಟು 5,142 ಕೋಟಿ ಮೊತ್ತದ ಯೋಜನೆಗಳು ಜಾರಿಯಾಗುತ್ತಿವೆ ಎಂದು ತಿಳಿಸಿದ್ದಾರೆ.
27.79 ಕೋಟಿ ರೂ.ಗಳ ವೆಚ್ಚದಲ್ಲಿ ಹುಬ್ಬಳ್ಳಿ ಮತ್ತು ತನ್ನಿಸಂದ್ರ ರೈಲ್ವೆ ವರ್ಕ್‌ಶಾಪ್‌ನಲ್ಲಿ ಡೆಮು/ಮೆಮು ಶೆಡ್ ನಿರ್ವಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು.
ಇದೇ ಸಂದರ್ಭದಲ್ಲಿ ದೇಶದ 10 ವಂದೇ ಭಾರತ್ ರೈಲು ಸಂಚಾರ ಸೇವೆಗೆ ಚಾಲನೆ ನೀಡಲಿದ್ದಾರೆ.
ಗುಜರಾತ್‌ನಲ್ಲಿ ಮಾ. 12 ರಂದು ಬೆಳಿಗ್ಗೆ 9.30ಕ್ಕೆ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪ್ರಧಾನಿ ಮೋದಿ, ಆನ್ ಲೈನ್ ವೇದಿಕೆ ಮೂಲಕ ಹುಬ್ಬಳ್ಳಿ ವಿಭಾಗೀಯ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ, ಧಾರವಾಡ ಗುಡಗೇರಿ ರೈಲು ನಿಲ್ದಾಣಗಳಲ್ಲಿ ಒಂದು ನಿಲ್ದಾಣ-ಒಂದು ಉತ್ಪನ್ನ’ ಯೋಜನೆಯಡಿ ಮಳಿಗೆಗಳನ್ನು ತೆರೆದು, ಸ್ಥಳೀಯ ಸಣ್ಣ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಲಾಗುವ ಯೋಜನೆಗಳಿಗೂ ಚಾಲನೆ ಸಿಗಲಿವೆ. ಒಟ್ಟಾರೆ ಈ ಎಲ್ಲ ಯೋಜನೆಗಳ ಅನುಷ್ಠಾಗಳು ದೇಶದ ರೈಲ್ವೆ ಅಭಿವೃದ್ಧಿಯಲ್ಲಿ ಹೊಸ ಮೈಲಿಗಲ್ಲಾಗಲಿದೆ.
ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಎಲ್ಲ ಪ್ರಯಾಣಿಕರಿಗೂ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿ ದೊರೆಯಲು ಪ್ರಧಾನ ಮಂತ್ರಿ ಜನೌಷಧಿ ಮಳಿಗೆ ಕೂಡ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.


Spread the love

Leave a Reply

error: Content is protected !!