Breaking News

ಧಾರವಾಡ ಲೋಕಸಭಾ ಕ್ಷೇತ್ರ: ಮತ್ತೇ‌ ಅಖಾಡಕ್ಕೆ ಇಳಿದ ಪ್ರಲ್ಹಾದ್ ಜೋಶಿ

Spread the love

ಹುಬ್ಬಳ್ಳಿ: ಎಂದಿಗಿಂತಲೂ ಈ ಸಲ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಗೊಂದಲ ಉಂಟಾಗಿತ್ತು. ಪಕ್ಷದ ಒಳೊಳಗೆ ಟಿಕೇಟ್ ಆಕಾಂಕ್ಷಿ ಪಟ್ಟಿ ಬೆಳದಿತ್ತು. ಅದರಲ್ಲೂ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಕೇಂದ್ರ ಪ್ರಲ್ಹಾದ್ ಜೋಶಿ ಅವರಿಗೆ ಟಿಕೇಟ್ ತಪ್ಪಿಸಬೇಕು ಹಾಗೂ ಅವರನ್ನು ಲಿಂಗಾಯತ ವಿರೋಧಿ ಅಂತಾ ಬಿಂಬಿಸುವ ಯತ್ನ ನಡೆಸಲಾಗಿತ್ತು. ಇದರಿಂದಾಗಿ ಸಹಜವಾಗಿಯೇ ಪ್ರಲ್ಹಾದ್ ಜೋಶಿ ಅವರಿಗೆ ಈ ಸಲ ಟಿಕೇಟ್ ಕೊಡಲ್ಲ ಕೊಟ್ಟರೇ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕೊಡತಾರೆ ಅಂತೆಲ್ಲಾ ಚರ್ಚೆ ನಡೆದಿತ್ತು. ಆದರೆ ಈಗ ಅದಕ್ಕೆಲ್ಲಾ ತಿಲಾಂಜಲಿ ಹೇಳಲಾಗಿದ್ದು ಧಲ ಅಭ್ಯರ್ಥಿಗಳ ಪಟ್ಟಿ ಬುಧವಾರ ಸಂಜೆ ಬಿಡುಗಡೆಯಾಗಿದ್ದು ಧಾರವಾಡ ಕ್ಷೇತ್ರಕ್ಕೆ ಹಾಲಿ ಸಂಸದ ಪ್ರಲ್ಲಾದ ಜೋಶಿ ಅವರಿಗೆ ಟಿಕೆಟ್ ಲಭಿಸಿದ್ದು, ಅವರು ಐದನೇ ಬಾರಿ ಚುನಾವಣಾ ಕಣಕ್ಕಿಳಿದಿದ್ದಾರೆ.
ಕಳೆದ ಸಲ ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಜಗದೀಶ ಶೆಟ್ಟ‌ರ್ ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿದ್ದರು. ಇತ್ತೀಚೆಗೆ ಅವರು ಬಿಜೆಪಿಗೆ ಮರಳಿ, ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಸರತ್ತು ನಡೆಸಿದ್ದರು. ಇದಲ್ಲದೇ, ಈ ಸಲ ಲಿಂಗಾಯತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ನಡೆದಿತ್ತು. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಧಾರವಾಡ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟವಾಗಿರಲಿಲ್ಲ. ಈ ಎಲ್ಲದರ ಹಿನ್ನೆಲೆಯಲ್ಲಿ ಕುತೂಹಲ ಹೆಚ್ಚಾಗಿತ್ತು.
ಪುನ‌ರ್ ವಿಂಗಡಣೆಗೆ ಮೊದಲು 2004ರಲ್ಲಿ ಧಾರವಾಡ ಉತ್ತರ ಲೋಕಸಭಾ ಕ್ಷೇತ್ರದಿಂದ ಮೊದಲ ಸಲ ಪ್ರಲಾದ ಜೋಶಿ ಸ್ಪರ್ಧಿಸಿದ್ದರು. ಇದಕ್ಕೂ ಮುಂಚೆ ವಿಜಯ ಸಂಕೇಶ್ವರ 1996, 1998 ,1990 ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ನಂತರ 2004ರಲ್ಲಿ ಬಿಜೆಪಿಯು ಜೋಶಿ ಅವರಿಗೆ ಅವಕಾಶ ನೀಡಿತು.
ಅಲ್ಲಿಂದ ಸತತ ನಾಲ್ಕು ಚುನಾವಣೆಗಳಲ್ಲಿ ಪ್ರಲ್ಹಾದ್ ಜೋಶಿ ಅವರು ಜಯಗಳಿಸಿದ್ದಾರೆ. 2004, 2009, 2014 ಹಾಗೂ 2019ರಲ್ಲಿ ಜಯಗಳಿಸಿದ್ದಾರೆ. ಪ್ರತಿ ಚುನಾವಣೆಯಲ್ಲೂ ತಮ್ಮ ಗೆಲುವಿನ ಅಂತರವನ್ನು ಹೆಚ್ಚಿಸಿಕೊಂಡಿದ್ದಾರೆ. ಕಳೆದ 2019ರ ಚುನಾವಣೆಯಲ್ಲಿ 6.84 ಲಕ್ಷ ಮತ ಪಡೆದಿದ್ದು, ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ವಿನಯ ಕುಲಕರ್ಣಿ ಅವರಿಗಿಂತ 2.05 ಲಕ್ಷಕ್ಕಿಂತ ಹೆಚ್ಚು ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ಪ್ರಮುಖ ಖಾತೆಗಳಾದ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಐದು ವರ್ಷ ಪೂರ್ಣಾವಧಿಯವರೆಗೆ ಸಮರ್ಥವಾಗಿ ನಿರ್ವಹಿಸಿದ್ದಾರೆ.‌
ಪ್ರಲ್ಹಾದ್ ಜೋಶಿ ಅವರು
ಆರ್‌ಎಸ್‌ಎಸ್‌ ಹಿನ್ನೆಲೆಯಿಂದ ಬಂದಿದ್ದು ಹುಬ್ಬಳ್ಳಿಯ ಈದ್ದಾ ಮೈದಾನದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅವರು ಬಿಜೆಪಿಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. 2012ರಿಂದ ನಾಲ್ಕು ವರ್ಷ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈಗ ಅವರ ಮುಂದೆ ದೊಡ್ಡ ಸವಾಲು ಅಂತೋ ಇದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಯಶಾಲಿಯಾಗಬೇಕು.


Spread the love

About Karnataka Junction

    Check Also

    ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ

    Spread the loveಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ …

    Leave a Reply

    error: Content is protected !!