Breaking News

ಬಿಜೆಪಿ ಅಳೆದು ತೂಗಿ ಟಿಕೆಟ್ ಘೋಷಣೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Spread the love

*ಬಿಜೆಪಿ ಅಳೆದು ತೂಗಿ ಟಿಕೆಟ್ ಘೋಷಣೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ*

ಧಾರವಾಡ : ಲೋಕಸಭೆ ಚುನಾವಣೆಯ 20 ಕ್ಷೇತ್ರದ ಅಭ್ಯರ್ಥಿಗಳಿಗೆ ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಟಿಕೆಟ್ ಘೋಷಣೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ಧಾರವಾಡ ನಗರದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಅಭೂತಪೂರ್ವ ಬದಲಾವಣೆಯಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅರ್ಥದಲ್ಲಿ ಲೋಕಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಹಂಚಿಕೆಯಾಗಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ದೊಡ್ಡ ಜವಾಬ್ದಾರಿ ನನಗೆ ಕೊಟ್ಟಿದ್ದರು, ಆರ್ಥಿಕ ಹಾಗೂ ವಿಜ್ಞಾನ ತಂತ್ರಜ್ಞಾನದಲ್ಲಿ ದೇಶ ಮುಂದುವರೆಯುತ್ತಿದೆ. ಅಭಿವೃದ್ಧಿ ಕೆಲಸದ ಜೊತೆ ಜನರೊಂದಿಗೆ ಸಂಪರ್ಕದಲ್ಲಿದ್ದೇವೆ. ಜನರು ನಮ್ಮ ಮೇಲೆ ಭರವಸೆ ಇಟ್ಟು ನಾಲ್ಕು ಸಲ ಆಯ್ಕೆ ಮಾಡಿದ್ದಾರೆ. ಈಗ ಮರಳಿ ಬಿಜೆಪಿ ಪಕ್ಷ ಟಿಕೆಟ್ ಘೋಷಿಸಿದ್ದು, ಈ ಭಾರಿ ಮೂರುವರೆ ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ ಎಂದು ತಿಳಿಸಿದರು.


Spread the love

About Karnataka Junction

    Check Also

    *ಮಡಿವಾಳೇಶ್ವರಮಠ ವಿವಾದ*: *ಉತ್ತರಾಧಿಕಾರಿ v/s ಟ್ರಸ್ಟ್*

    Spread the love*ಮಡಿವಾಳೇಶ್ವರಮಠ ವಿವಾದ*: *ಉತ್ತರಾಧಿಕಾರಿ v/s ಟ್ರಸ್ಟ್* *ಕೋರ್ಟ್ ಮೆಟ್ಟಿಲೇರಿದ ಗರಗ ಮಠದ ಪ್ರಶಾಂತ ದೇವರು* ಧಾರವಾಡ : …

    Leave a Reply

    error: Content is protected !!