ಸಾರಿಗೆ ಸಂಸ್ಥೆಯಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ

Spread the love

ಹುಬ್ಬಳ್ಳಿ: ಮಹಿಳೆಯರು ಮನೆಯೊಳಗೆ ಕೌಟುಂಬಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಾ ಹೊರಗೆ ಪುರುಷರಿಗೆ ಸರಿ ಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿದ್ದಾರೆ ಎಂದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ಕಚೇರಿಯಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹನ್ನೆರಡನೇ ಶತಮಾನದಲ್ಲಿಯೇ ತಮ್ಮ ಅನುಭವ ಮಂಟಪದಲ್ಲಿ ಅಕ್ಕಮಹಾದೇವಿಗೆ ಪ್ರಾಧಾನ್ಯತೆ ನೀಡುವ ಮೂಲಕ ಬಸವಣ್ಣನವರು ಮಹಿಳಾ ಸಮಾನತೆಯ ಮೊದಲ ಪ್ರತಿಪಾದಕರಾಗಿದ್ದಾರೆ. ಸಾರಿಗೆ ಸಂಸ್ಥೆಯಲ್ಲಿ ಎಲ್ಲಾ ಹಂತದ ಹುದ್ದೆಗಳಲ್ಲಿ ಮಹಿಳೆಯರಿದ್ದಾರೆ. ಶಕ್ತಿ ಯೋಜನೆಯು ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆಯಾಗಿದೆ ಎಂದು ಹೇಳಿದರು.
ವಿಭಾಗೀಯ ಸಂಚಾರ ಅಧಿಕಾರಿ ಕೆ.ಎಲ್.ಗುಡೆಣ್ಣವರ ಮಾತನಾಡಿ ಮಹರಾಷ್ಟ್ರದ ಸಾವತ್ರಿಬಾಯಿ ಫುಲೆಯವರು ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿದರು. ತೀವ್ರ ಪ್ರತಿರೋಧವನ್ನು ಮೆಟ್ಟಿ ಮೊದಲ ಬಾಲಕಿಯರ ಶಾಲೆ ಆರಂಭಿಸಿ ಮಹಿಳಾ ಶಿಕ್ಷಣದ ಪ್ರವರ್ತಕರಾಗಿದ್ದಾರೆ. ವೀರರಾಣಿ ಕಿತ್ತೂರು ಚೆನ್ನಮ್ಮ, ಒನಕೆ ಓಬವ್ವ ಸೇರಿದಂತೆ ಅನೇಕ ಮಹಿಳೆಯರು ದೇಶದ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದರು ಎಂದು ಹೇಳಿದರು.
ವಿಭಾಗೀಯ ಭದ್ರತಾ ಅಧೀಕ್ಷಕಿ ಸುಮಂಗಲಾ ಹಿರೇಮಠ ನಿರೂಪಿಸಿ, ಮಹಿಳಾ ದಿನಾಚರಣೆಯ ಹಿನ್ನೆಲೆ ಹಾಗೂ ಮಹತ್ವದ ಬಗ್ಗೆ ತಿಳಿಸಿದರು‌. ಸಿಬ್ಬಂದಿ ಮೇಲ್ವಿಚಾರಕಿ ಸಲೋಮಿ ಹವಳದ ವಂದಿಸಿದರು.
ಅಧಿಕಾರಿಗಳಾದ ಸದಾನಂದ ಒಡೆಯರ, ಐ.ಐ.ಕಡ್ಲಿಮಟ್ಟಿ, ಐ.ಜಿ.ಮಾಗಾಮಿ, ಮಹಿಳಾ ನೌಕರರು ಮತ್ತಿತರ ಸಿಬ್ಬಂದಿಗಳು ಇದ್ದರು.com


Spread the love

Leave a Reply

error: Content is protected !!