Breaking News

ಭಾರೀ ಬಿಗಿ ಬಂದೋಬಸ್ತ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭ

Spread the love

ಭಾರೀ ಬಿಗಿ ಬಂದೋಬಸ್ತ್ ನಲ್ಲಿ
ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭ

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಇಂದಿನಿಂದ ಏಪ್ರಿಲ್ 6 ರವರೆಗೆ ನಡೆಯುತ್ತಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಮಕ್ಕಳು ಸ್ವಲ್ಪ ಆತಂಕದಲ್ಲಿಯೇ ಪರೀಕ್ಷಾ ಕೇಂದ್ರ ಗಳತ್ತ ದಾಪುಗಾಲು ಹಾಕಿದರು.
ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಲಾಗಿದ್ದು
ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲಾಧ್ಯಂತ 29,929 ವಿದ್ಯಾರ್ಥಿಗಳು ಹಾಜರು ಆಗಿದ್ದು ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಲಾಗಿದೆ .
ಧಾರವಾಡ ಶಹರದ 34, ಧಾರವಾಡ ಶಹರದ 16,ಧಾರವಾಡ ಗ್ರಾಮೀಣದ 14,ಹುಬ್ಬಳ್ಳಿ ಗ್ರಾಮೀಣದ 13 ಕಲಘಟಗಿಯ 8 ಕುಂದಗೋಳದ 7
ನವಲಗುಂದದ 9 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಲಾಗಿದೆ.
ಕೇಲ ಶಿಕ್ಷರ ಸಂಘಟನೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ವಿರೋಧದ ನಡುವೆಯೂ
ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಪ್ರತಿ ಕೊಠಡಿಗಳಿಗೆ ಸಿ.ಸಿ.ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ ‌
ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ
ಜಿಲ್ಲಾ ಜಾಗೃತದಳದ 3 ತಂಡಗಳ ನೇಮಕ ಆಗಿದೆ‌‌. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡಸಲು ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಜಿಲ್ಲಾ ಹಂತದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದ ಮೇರೆಗೆ ಪ್ರತಿಯೊಂದು ತಾಲೂಕಿನ ಪರೀಕ್ಷಾ ಕೇಂದ್ರಗಳ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಉಪನಿರ್ದೇಶಕರ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಗ್ರೂಪ್ ಬಿ ವೃಂದದ ಅಧಿಕಾರಿಗಳನ್ನು ಸ್ಥಾನಿಕ ಜಾಗೃತದಳದ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರದ ಪೊಲೀಸ್ ಆಯುಕ್ತರು ಸಿಆರ್.ಪಿಸಿ. ಸೆಕ್ಷನ್ 144 ಕಲಂ ನ್ನು ಜಾರಿ ಮಾಡಿದ್ದು ಧಾರವಾಡ ಗ್ರಾಮೀಣ ಜಿಲ್ಲೆ ಹಾಗೂ ಮಹಾನಗರದ ಪರೀಕ್ಷಾ ಕೇಂದ್ರದಗಳ ಸುತ್ತ 200 ಮೀ ಅಂತರದಲ್ಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿದೆ.
ಜಿಲ್ಲಾ ಆರೋಗ್ಯ ಇಲಾಖೆ ಪರೀಕ್ಷಾ ದಿನದಂದು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ದಾದಿಯರನ್ನು ನೇಮಕಾತಿ ಮಾಡಿದೆ. ಜಿಲ್ಲೆಯ ಹೆಸ್ಕಾಂಗೆ ಪರೀಕ್ಷಾ ದಿನದಂದು ವಿದ್ಯುತ್ ನಿಲುಗಡೆಯಾಗದಂತೆ ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಜಿಲ್ಲಾ ಜಾಗೃತದಳದ 3 ತಂಡಗಳನ್ನು ನೇಮಕ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲಾಗಿದೆ.
ಹೋಳಿ ಹಬ್ಬದ ನಿಮಿತ್ಯ ಹುಬ್ಬಳ್ಳಿಯ ಕೆಲವೊಂದು ಪ್ರದೇಶಗಳಲ್ಲಿ ಪರೀಕ್ಷಾ ದಿನಗಳಂದು ಬಣ್ಣದ ಹಬ್ಬ ಇರುವದರಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ಮಕ್ಕಳಿಗೆ ತೊಂದರೆಯಾಗದಂತೆ ಕ್ರಮವಹಿಸಲು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶ ಮತ್ತು ಇತರೆ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ಮಕ್ಕಳು ಪ್ರವೇಶ ಪತ್ರವನ್ನು ತೋರಿಸಿ ಉಚಿತ ಪ್ರಯಾಣ ಮಾಡಲು ಹುಬ್ಬಳ್ಳಿಯ ವಾ.ಕ.ರಾ.ರ. ಸಂಸ್ಥೆ ಅವಕಾಶ ನೀಡಿದೆ


Spread the love

About Karnataka Junction

    Check Also

    *ಮಡಿವಾಳೇಶ್ವರಮಠ ವಿವಾದ*: *ಉತ್ತರಾಧಿಕಾರಿ v/s ಟ್ರಸ್ಟ್*

    Spread the love*ಮಡಿವಾಳೇಶ್ವರಮಠ ವಿವಾದ*: *ಉತ್ತರಾಧಿಕಾರಿ v/s ಟ್ರಸ್ಟ್* *ಕೋರ್ಟ್ ಮೆಟ್ಟಿಲೇರಿದ ಗರಗ ಮಠದ ಪ್ರಶಾಂತ ದೇವರು* ಧಾರವಾಡ : …

    Leave a Reply

    error: Content is protected !!