Breaking News

ವಾಣಿಜ್ಯನಗರಿಯಲ್ಲಿ ಜಗ್ಗಲಗಿ ಹಬ್ಬ: ನಾಳೆ ವಿಶಿಷ್ಟ ಆಚರಣೆಗೆ ಚಾಲನೆ..!*

Spread the love

*ವಾಣಿಜ್ಯನಗರಿಯಲ್ಲಿ ಜಗ್ಗಲಗಿ ಹಬ್ಬ: ನಾಳೆ ವಿಶಿಷ್ಟ ಆಚರಣೆಗೆ ಚಾಲನೆ..!*

ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಹೋಳಿ ಹಬ್ಬದ ಅಂಗವಾಗಿ ಹುಬ್ಬಳ್ಳಿ ಜಗ್ಗಲಗಿ ಹಬ್ಬವನ್ನು ಮಾ.28 ರಂದು ಮಧ್ಯಾಹ್ನ 3 ಕ್ಕೆ ನಗರದ ಮೂರುಸಾವಿರಮಠದ ಮೈದಾನದಿಂದ ಆಯೋಜನೆ ಮಾಡಲಾಗಿದೆ ಎಂದು ಶಾಸಕರು ಹಾಗೂ ಹುಬ್ಬಳ್ಳಿ ಜಗ್ಗಲಗಿ ಹಬ್ಬದ ಆಯೋಜಕರಾದ ಮಹೇಶ ಟೆಂಗಿನಕಾಯಿ ಹಾಗೂ ಮೂಜಗು ಸ್ವಾಮೀಜಿ ಹೇಳಿದರು.

ಹುಬ್ಬಳ್ಳಿಯ ಮೂರುಸಾವಿರಮಠದ ಆವರಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಿನ ಕಾರ್ಯಕ್ರಮದ ಸಾನಿಧ್ಯವನ್ನು ಮೂರುಸಾವಿರಮಠದ ಡಾ.ಗುರುಸಿದ್ದ ರಾಜಯೋಗಿಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಇವರ ಜತೆಗೆ ನಾಡಿನ ವಿವಿಧ ಮಠಾಧೀಶರು, ಗಣ್ಯಮಾನ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಈಗಾಗಲೇ ಕಳೆದ 11 ವರ್ಷಗಳಿಂದ ವಿವಿಧ ಗ್ರಾಮಗಳ ಹಾಗೂ ಹುಬ್ಬಳ್ಳಿ ನಗರದ ವಿವಿಧ ಪ್ರದೇಶಗಳ ಜಗ್ಗಲಗಿ ತಂಡಗಳ ಸಹಾಯ, ಸಹಕಾರದೊಂದಿಗೆ ಅತ್ಯಂತ ವಿಜೃಂಭಣೆಯಿಂದ ಜಗ್ಗಲಗಿ ಹಬ್ಬವನ್ನು ಆಚರಿಸುತ್ತಾ ಬರಲಾಗಿದೆ. ಅದರಂತೆ ಈ ವರ್ಷವೂ ಹುಬ್ಬಳ್ಳಿ ಜಗ್ಗಲಗಿ ಹಬ್ಬದ ಭವ್ಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ನೂರಾರು ಜಗ್ಗಲಗಿ, ವಿವಿಧ ಚರ್ಮವಾದ್ಯಗಳ ಇಂಪಾದ ನಾದದೊಂದಿಗೆ, ಜಾನಪದ ಕಲಾವಿದರ ಸಾರಥ್ಯದಲ್ಲಿ ಮೂರುಸಾವಿರಮಠದ ಮೈದಾನದಿಂದ ಮೆರವಣಿಗೆ ಆರಂಭಗೊಂಡು ವಿಕ್ಟೋರಿಯಾ ರಸ್ತೆ, ಕೊಪ್ಪಿಕರ ರಸ್ತೆ, ಬ್ರಾಡ್ ವೇ, ದುರ್ಗಲ ಬಯಲು ವೃತ್ತ, ರಾಧಾಕೃಷ್ಣ ಗಲ್ಲಿ, ಬಾರದಾನ ಸಾಲ, ಜವಳಿ ಸಾಲ, ಬೆಳಗಾಂವ್ ಗಲ್ಲಿ, ಪೆಂಡಾರ್ ಗಲ್ಲಿ, ಶ್ರೀ ತುಳಜಾಭವಾನಿ ವೃತ್ತ, ದಾಜಿಬಾನಪೇಟ ಮಾರ್ಗವಾಗಿ ಪುನಃ ಮೂರುಸಾವಿರಮಠವನ್ನು ತಲುಪಲಿದೆ ಎಂದು ತಿಳಿಸಿದರು.

ಈ ಜಗ್ಗಲಗಿ ಹಬ್ಬದಲ್ಲಿ ಸುಳ್ಳ, ಬ್ಯಾಹಟ್ಟಿ, ಛಬ್ಬಿ, ಸೂರಶೆಟ್ಟಿಕೊಪ್ಪ, ಧಾರವಾಡ, ಅರಳಿಕಟ್ಟಿ, ಅಮರಗೋಳ, ತಾರಿಹಾಳ, ಶಿವಳ್ಳಿ, ಕಲಘಟಗಿ, ಗುಂಡೇನಟ್ಟಿ, ಮರೆವಾಡ, ಬೊಮ್ಮಸಮುದ್ರ, ಅಮ್ಮಿನಬಾವಿ, ಸೋಮನಕೊಪ್ಪ, ಗಂಗಾವತಿ, ಕಣವಿಹೊನ್ನಾಪುರ, ಹಂಚಿನಾಳ ಸೇರಿದಂತೆ ಇನ್ನಿತರ ಹಳ್ಳಿಗಳಿಂದ ಒಟ್ಟು 400 ತಂಡಗಳು ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.


Spread the love

About Karnataka Junction

[ajax_load_more]

Check Also

ವೀರಶೈವ ಲಿಂಗಾಯತ ಧಾರವಾಡ ಮಹಾಸಭಾ ಜಿಲ್ಲಾ ಘಟದ ಅಧ್ಯಕ್ಷರಿಗೆ ಸನ್ಮಾನ

Spread the loveಹುಬ್ಬಳ್ಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಧಾರವಾಡ ಮಹಾಸಭಾ ಜಿಲ್ಲಾ ಘಟಕ ಲಿಂಗಾಯತ ಭವನದಲ್ಲಿ ಅಖಿಲ ಭಾರತ …

Leave a Reply

error: Content is protected !!