*ಕಾಂಗ್ರೆಸ್ಸಿಗೆ ಸಂಪೂರ್ಣ ಬೆಂಬಲ ನೀಡಲು ಸಿದ್ಧ: ಮಹದಾಯಿ ಹೋರಾಟಗಾರರ ನಿರ್ಧಾರ..!*
ಹುಬ್ಬಳ್ಳಿ: ಉತ್ತರ ಕರ್ನಾಟಕದ ಜನರಿಗೆ ಮಹದಾಯಿ ನೀರು ಕೊಡದ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಹದಾಯಿ ಹೋರಾಟಗಾರರು ಹಾಗೂ ಕರ್ನಾಟಕ ಸಮತಾ ಪಕ್ಷದ ವತಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತೇವೆ ಎಂದು ಮಹದಾಯಿ ಹೋರಾಟಗಾರರಾದ ವಿರೇಶ ಸೊಬರದಮಠ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾಲ್ಕು ಜಿಲ್ಲೆ 11 ತಾಲೂಕಿನಲ್ಲಿ ರೈತ ಸೇನಾ ಕರ್ನಾಟಕ ಪದಾಧಿಕಾರಿಗಳು ಹಾಗೂ ಮಹದಾಯಿ ಹೋರಾಟಗಾರರು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡುತ್ತೇವೆ ಎಂದರು.
ಒಂಬತ್ತು ವರ್ಷಗಳ ಹೋರಾಟಕ್ಕೆ ಯಾವುದೇ ಫಲ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತದೆ ಎಂಬುವಂತ ಮಹದಾಸೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಇನ್ನೂ ನವಲೂರಿನ ಖಾಸಗಿ ಹೋಟೆಲ್ ನಲ್ಲಿ ಸಂಪೂರ್ಣ ಬೆಂಬಲ ನೀಡುವ ಮೂಲಕ ನಮ್ಮ ಬೇಡಿಕೆಯ ಕುರಿತು ಮನವಿ ಸಲ್ಲಿಸುತ್ತೇವೆ ಎಂದರು.