Breaking News

ಗಾಮನಗಟ್ಟಿ ಗ್ರಾಮದ ಸಮಸ್ಯೆಗಳ ಕುರಿತು ಸಭೆ

Spread the love

ಗಾಮನಗಟ್ಟಿ ಗ್ರಾಮದ ಸಮಸ್ಯೆಗಳ ಕುರಿತು ಸಭೆ

ಶಾಸಕ ಅರವಿಂದ ಬೆಲ್ಲದ ಸಕಾರಾತ್ಮಕವಾಗಿ ಸ್ಪಂದನೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಗಾಮನಗಟ್ಟಿ ಗ್ರಾಮದಲ್ಲಿನ ಸಮಸ್ಯೆಗಳ ಕುರಿತು ಸ್ಥಳೀಯರ ಜೊತೆಗೆಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ವಿಧಾನ ಸಭೆಯ ವಿರೋಧ ಪಕ್ಷದ ಉಪ ನಾಯಕರಾದ ಅರವಿಂದ ಬೆಲ್ಲದ ಸಭೆ ನಡೆಸಿ ಹಲವಾರು ಬೇಡಿಕೆ ಹಾಗೂ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ಮಂಜುನಾಥ ನಗರದಲ್ಲಿನ
ಗೃಹ ಕಚೇರಿಯಲ್ಲಿ ಗಾಮನಗಟ್ಟಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಗ್ರಾಮಸ್ಥರ ಸಮಸ್ಯೆಗಳು, ಕುಂದುಕೊರತೆಗಳು ಮತ್ತು ಗ್ರಾಮದ ಅಭಿವೃದ್ಧಿ ಕಾಮಗಾರಿಗಳ ಕುರಿತು ಸವಿವರವಾಗಿ ಚರ್ಚಿಸಲಾಯಿತು..ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ
ಚಂದ್ರಶೇಖರ ಮನಗುಂಡಿ, ಹಿರಿಯರಾದ ಕರಿಯಪ್ಪ ಅವರಾಧಿ, ಸ್ಥಳೀಯರಾದ ಶೀತಲ ಗುರಣ್ಣವರ, ರಾಜು ಬೆಂಗೇರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು


Spread the love

About Karnataka Junction

    Check Also

    ವಿದ್ಯಾರ್ಥಿಗಳು ಆಯ್ಕೆ ವಿಷಯ ಗೊಂದಲಕಾರಿಯಾಗಬಾರದು: ಡಾ.ವೆಂಕಟೇಶ ರಾಯ್ಕರ್

    Spread the loveವಿದ್ಯಾರ್ಥಿಗಳು ಆಯ್ಕೆ ವಿಷಯ ಗೊಂದಲಕಾರಿಯಾಗಬಾರದು: ಹುಬ್ಬಳ್ಳಿ: ತಾವು ಆಯ್ಕೆ ಮಾಡಿಕೊಳ್ಳುವ ವಿಷಯ ತಮಗೆ ಇಷ್ಟವಾಗಿರಬೇಕು ಅಂದಾಗ ಮಾತ್ರ …

    Leave a Reply

    error: Content is protected !!