Breaking News

ಕರ್ನಾಟಕವನ್ನು ಪಾಕ್ ಗಿಂತ ಕಡೆ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ ಕಿಡಿ

Spread the love

ಕರ್ನಾಟಕವನ್ನು ಪಾಕ್ ಗಿಂತ ಕಡೆ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ ಕಿಡಿ

*ಹನುಮಾನ್ ಚಾಲೀಸ್ ಪಠಿಸಿದವನ ಮೇಲೆ ಹಾಕಿರುವ FIR ಕೂಡಲೇ ಕೈ ಬಿಡಲು ಆಗ್ರಹ*

*-ಸಿದ್ದರಾಮಯ್ಯ- ಡಿಕೆಶಿ ಮೂಲಭೂತವಾದಿ ಇಸ್ಲಾಂ ರಾಷ್ಟ್ರ ಆಳುತ್ತಿದ್ದಾರೆಯೇ?*

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕವನ್ನು ಪಾಕಿಸ್ಥಾನಕ್ಕಿಂತ ಕಡೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಹನುಮಾನ್ ಚಾಲೀಸ್ ಪಠಿಸಿದವರ ಮೇಲೆ FIR ಹಾಕಿರುವ ಬಗ್ಗೆ ಹೀಗೆ ಕಠೋರ ಪ್ರತಿಕ್ರಿಯೆ ನೀಡಿದರು.

ಇವರೇನು ಕರ್ನಾಟಕವನ್ನು ಅಳುತ್ತಿದ್ದರೋ? ಅಥವಾ ಮೂಲಭೂತವಾದಿ ಇಸ್ಲಾಮಿಕ್ ರಾಷ್ಟ್ರವನ್ನು ಆಳುತ್ತಿದ್ದರೋ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ರಾಜ್ಯ ಸರ್ಕಾರ ಕೂಡಲೇ ಹನುಮಾನ್ ಚಾಲೀಸ್ ಪಠಿಸಿದವರ ಮೇಲೆ FIR ಹಾಕಿರುವುದನ್ನು ಕೈ ಬಿಡಬೇಕು ಎಂದು ಸಚಿವ ಜೋಶಿ ಆಗ್ರಹಿಸಿದರು.

ಹನುಮಾನ್ ಚಾಲೀಸ್ ಪಠಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದ ಸಚಿವರು, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದಾಗಲೂ ಹೀಗೇ ಹಿಂದೂ ವಿರೋಧಿ ನಡೆ ತೋರಿದೆ ಎಂದು ಹರಿ ಹಾಯ್ದರು.

*ಕಮ್ಯುನಿಟಿ ರಾಜಕಾರಣ:* ಕಾಂಗ್ರೆಸ್ ಪಕ್ಷ ಕಮ್ಯುನಿಟಿ ರಾಜಕಾರಣ ಮಾಡುತ್ತಿದೆ. ವೋಟ್ ಬ್ಯಾಂಕ್ ಗಾಗಿ ತುಷ್ಟಿಕರಣದಲ್ಲಿ ತೊಡಗಿದೆ ಎಂದು ಆರೋಪಿಸಿದರು.

*ಬೆಳ್ಳಂಬೆಳಗ್ಗೆ ನಮಾಜ್ ಮಾಡಬಹುದೇ*?: ಬೆಳಕು ಹರಿಯುವ ಮೊದಲೇ 6 ಗಂಟೆಗೂ ಮುನ್ನ ಆ ಕೋಮಿನವರು ನಮಾಜ್ ಮಾಡಬಹುದು. ಆದರೆ, ಹಿಂದೂಗಳು ಹನುಮಾನ್ ಚಾಲೀಸ್ ಹಾಕುವುದು ತಪ್ಪೇ? ಎಂದು ಜೋಶಿ ಪ್ರಶ್ನಿಸಿದರು.

*ಜನ ಅರ್ಥ ಮಾಡಿಕೊಳ್ಳಲಿ:* ಕಾಂಗ್ರೆಸ್ ತುಷ್ಟಿಕರಣದ ಪರಕಾಷ್ಟೇ ತಲುಪಿದೆ. ರಾಜ್ಯದ ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಕರೆ ನೀಡಿದರು.

*ಸಿದ್ದು-ಡಿಕೆಶಿ ಯಾವ ರಾಜ್ಯದಲ್ಲಿ ಇದ್ದೀರಿ?* ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಾವ ರಾಜ್ಯದಲ್ಲಿ ಇದ್ದೀರಿ? ಕೂಡಲೇ ಹನುಮಾನ್ ಚಾಲೀಸ್ ಪಠಿಸಿದ ಅಂಗಡಿಯಾತನ ಮೇಲೆ ಹಾಕಿರುವ FIR ಕೈ ಬಿಟ್ಟು, ಆತನನ್ನು ಪ್ರಕಾರಣದಿಂದ ಮುಕ್ತಗೊಳಿಸಿ ಎಂದು ಸಚಿವ ಜೋಶಿ ಅಗ್ರಹಿಸಿದರು.


Spread the love

About Karnataka Junction

    Check Also

    ವಿದ್ಯಾರ್ಥಿಗಳು ಆಯ್ಕೆ ವಿಷಯ ಗೊಂದಲಕಾರಿಯಾಗಬಾರದು: ಡಾ.ವೆಂಕಟೇಶ ರಾಯ್ಕರ್

    Spread the loveವಿದ್ಯಾರ್ಥಿಗಳು ಆಯ್ಕೆ ವಿಷಯ ಗೊಂದಲಕಾರಿಯಾಗಬಾರದು: ಹುಬ್ಬಳ್ಳಿ: ತಾವು ಆಯ್ಕೆ ಮಾಡಿಕೊಳ್ಳುವ ವಿಷಯ ತಮಗೆ ಇಷ್ಟವಾಗಿರಬೇಕು ಅಂದಾಗ ಮಾತ್ರ …

    Leave a Reply

    error: Content is protected !!