https://youtu.be/vCfkUHbKjW0
ಧಾರವಾಡ: ಧಾರವಾಡದಿಂದ ಆಂಧ್ರಪ್ರದೇಶಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 250 ಕೆಜಿ ಶ್ರೀಗಂಧದ ಕಟ್ಟಿಗೆಗಳನ್ನು ಧಾರವಾಡದ ಅರಣ್ಯ ಇಲಾಖೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರಿನ ಗುರುಮೂರ್ತಿ, ಗದಗಿನ ಮುದುಕಪ್ಪ ಪೂಜೇರಿ, ಹಿರಿಯಪ್ಪ ಹಿರೇಮನಿ ಹಾಗೂ ಹಾವೇರಿಯ ಭೀಮಪ್ಪ ಸುಣಗಾರ ಎಂಬುವವರನ್ನು ಬಂಧಿಸಿರುವ ಪೊಲೀಸರು ಅವರಿಂದ 25 ಲಕ್ಷ ರೂಪಾಯಿ ಬೆಲೆಬಾಳುವ ಶ್ರೀಗಂಧದ ಕಟ್ಟಿಗೆಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಇನ್ನೂ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.
ಇನ್ನು ಶ್ರೀಗಂಧ ಸಾಗಾಣಿಕೆಗಾಗಿ ಬಳಿಸಿದ್ದ ಒಂದು ಕಾರು ಮತ್ತು ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಆಂಧ್ರಪ್ರದೇಶದಲ್ಲಿರುವ ಸುಗಂಧ ದ್ರವ್ಯ ಕಾರ್ಖಾನೆಗೆ ಈ ಕಟ್ಟಿಗೆಗಳನ್ನು ಸಾಗಿಸಲಾಗುತ್ತಿತ್ತು. ಧಾರವಾಡದ ನುಗ್ಗಿಕೇರಿ ಕ್ರಾಸ್ ಹತ್ತಿರ ಈ ಆರೋಪಿತರನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ಮೂವರು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಜಾಲ ಬೀಸಲಾಗಿದೆ.