Breaking News

ಮಲ್ಲಪ್ರಭಾ ಕಾಲುವೆಗೆ ನೀರು ಮೇ 14 ರಿಂದ 23 ರವರೆಗೆ

Spread the love

*ಕುಡಿಯುವ ನೀರಿನ ಸಮಸ್ಯೆ ನಿವಾರಣೆ:*
*ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು*

*ಧಾರವಾಡ : ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕು ವ್ಯಾಪ್ತಿಯ 58 ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲಾಗುವುದೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಈ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತ ಬರಗಾಲದ ನಡುವೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ 10 ದಿನಗಳ ಕಾಲ ನಿರಂತರ ಮಲಪ್ರಭಾ ಬಲದಂಡೆ ಕಾಲುವೆಗಳಿಂದ 0.5 ಟಿಎಂಸಿ (600 ಕ್ಯೂಸೆಕ್ಸ್) ನೀರನ್ನು ನಾಲ್ಕು ತಾಲೂಕುಗಳ 58 ಕೆರೆಗಳಿಗೆ ಬಿಡಲಾಗುವುದು.

ನವಲಗುಂದ ತಾಲೂಕಿನ 37 ಕೆರೆ, ಅಣ್ಣಿಗೇರಿಯ 13, ಹುಬ್ಬಳ್ಳಿಯ 7 ಹಾಗೂ ಕುಂದಗೋಳದ 3 ಪೂರಕ ಸಂಗ್ರಹಣಾ ಕೆರೆಗಳನ್ನು ಭರ್ತಿ ಮಾಡಲಾಗುವುದು ಆಯಾ ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ, ನೀರಾವರಿ ಇಲಾಖೆ ಎಇಇಗಳು ಕ್ರೀಯಾಶೀಲರಾಗಿ ನಿಗಾ ವಹಿಸಿತಕ್ಕದ್ದು ಎಂದು ಅವರು ತಿಳಿಸಿದರು.

ಕಾಲುವೆಗೆ ಹರಿಸಲಾದ ನೀರು ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆಯಾಗತಕ್ಕದ್ದು ಕುಡಿಯುವ ನೀರು ಹೊರತುಪಡಿಸಿ ಇನ್ಯಾವುದೇ ಉದ್ದೇಶಕ್ಕಾಗಿ ಬಳಕೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ತೀವ್ರ ನಿಗಾ ವಹಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ನೀರಾವರಿ ಇಲಾಖೆ, ಕಂದಾಯ ಇಲಾಖೆ, ಹೆಸ್ಕಾಂ, ಪೋಲಿಸ್ ಹಾಗೂ ಗ್ರಾಮೀಣ ಕುಡಿಯುವ ನೀರು ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೂರು ತಂಡಗಳನ್ನು ಮೂರು ಶಿಫ಼್ಟಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು. ಎಲ್ಲರೂ ಒಬ್ಬರಿಗೊಬ್ಬರು ಸಹಕಾರದೊಂದಿಗೆ ನಾಲ್ಕು ತಾಲೂಕುಗಳ 7 ಉಪ ವಿಭಾಗಗಳ ಸುಮಾರು 90 ಕಿ.ಮೀ. ವ್ಯಾಪ್ತಿಯ ಕಾಲುವೆ ಸುತ್ತ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಿ ಕ್ರಿಯಾಶೀಲರಾಗಿ ಕೆಲಸ ಮಾಡತಕ್ಕದ್ದು ಎಂದರು.

ಕಾಲುವೆ ಸುತ್ತಲಿನ 66 ಗ್ರಾಮಗಳಲ್ಲಿ 144 ಸೆಕ್ಷನ್ ಆದೇಶ ಹೊರಡಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು. ನೀರು ಹರಿಸುವ ಸಮಯದಲ್ಲಿ ಆಯಾ ವಿಭಾಗಗಳಲ್ಲಿ ಪೋಲಿಸ ಸಿಬ್ಬಂದಿಯನ್ನು ನಿಯೋಜಿಸಲಾಗಿದೆಂದು ಪೋಲಿಸ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ತಿಳಿಸಿದರು.

ಬರಗಾಲ ಸ್ಥಿತಿಯಾಗಿರುವುದರಿಂದ 58 ಕೆರೆಗಳನ್ನು ಸಂಪೂರ್ಣ ಭರ್ತಿ ಮಾಡಲಾಗುವುದು. ಕುಡಿಯುವ ನೀರು ಹೊರತುಪಡಿಸಿ ಬೇರೆ ಉದ್ದೇಶಕ್ಕೆ ನೀರು ಬಳಕೆಯಾಗದಂತೆ ಆಯಾ ವ್ಯಾಪ್ತಿಯ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರರು, ಪಿಡಿಓ ಗ್ರಾಮಲೆಕ್ಕಿಗರು, ಪೋಲಿಸ್ ಸಿಬ್ಬಂದಿ ತಮ್ಮ ವ್ಯಾಪ್ತಿಯಲ್ಲಿ ಚುರುಕಾಗಿ ಕಾರ್ಯನಿರ್ವಹಿಸಬೇಕೆಂದರು. ಹೆಸ್ಕಾಂ ಅಧಿಕಾರಿಗಳು ನೀರು ಹರಿಸುವ ಸಮಯದಲ್ಲಿ ಎಲ್ಲ ಐಪಿಸೆಟ್‍ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸತಕ್ಕದ್ದು, ಸೆಕ್ಷನ್ ಅಧಿಕಾರಿಗಳನ್ನು ಇದಕ್ಕೆ ನೇಮಿಸಲಾಗುವುದೆಂದು ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಕಿರಣ ಕುಮಾರ ಅವರು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ವಿಜಯಕುಮಾರ ಅಜೂರ, ಮಲಪ್ರಭಾ ಯೋಜನಾ ವಲಯದ ಸೂಪರಿಂಟೆಂಡೆಂಟ್ ಇಂಜಿನೀಯರ ಡಾ. ಎಸ್.ಬಿ.ಮಲ್ಲಿಗವಾಡ, ಬ್ಯಾಹಟ್ಟಿ ವಿಭಾಗದ ಇಇ ಮನೋಹರ ಬಿಸ್ನಾಳ, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಇಇ ಆರ್.ಎಂ. ಸೊಪ್ಪಿಮಠ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
*******


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!