ಬೆಂಗಳೂರು : ನಾಯಕತ್ವ ಬದಲಾವಣೆ ಕುರಿತು ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ವಿದ್ಯಮಾನಗಳು ತಾರ್ಕಿಕ ಅಂತ್ಯಕ್ಕೆ ಸಮೀಪಿಸುತ್ತಿರುವ ಬೆಳವಣಿಗೆಯ ನಡುವೆ ಮಠಾಧೀಶರು ಈಗ ಬಿಜೆಪಿ ರಾಜಕೀಯ ಅಂಗಳದಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರ ತಡರಾತ್ರಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬದಲಾಯಿಸಿ ಪಂಚಮಸಾಲಿ ಸಮಾಜಕ್ಕೆ ಸಿಎಂ ಹುದ್ದೆ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಗುರುವಾರ ಬಿಜೆಪಿ ಶಾಸಕರಿಂದ ಸಿಎಂ ಪರ – ವಿರೋಧ ಅಹವಾಲು ಸ್ವೀಕರಿಸಿದ ಬಳಿಕ ರಾತ್ರಿ ಕುಮಾರ ಕೃಪ ಅತಿಥಿ ಗೃಹದಲ್ಲಿ ಭೇಟಿ ಮಾಡಿದ ಸ್ವಾಮೀಜಿ, ನಾಯಕತ್ವ ಬದಲಾವಣೆ ಮತ್ತು ಪಂಚಮಸಾಲಿ ಸಮಾಜದ ನಿಲುವಿನ ಕುರಿತು ಅರುಣ್ ಸಿಂಗ್ ಜತೆ ಕೆಲಹೊತ್ತು ಸಮಾಲೋಚನೆ ನಡೆಸಿದರು.ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ಅವರ ಹೆಸರಿನಲ್ಲಿ ಹಲವರು ಆಡಳಿತ ದುರುಪ ಯೋಗಪಡಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಿವೃತ್ತಿ ನೀಡಿ ಹೊಸಬರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು. ಪಂಚಮಸಾಲಿ ಸಮಾಜ ಯಡಿಯೂರಪ್ಪನವರನ್ನು ನಾಲ್ಕು ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಇಷ್ಟೊಂದು ಅವಕಾಶ ನೀಡಿದರೂ ಅವರು ಸಮಾಜದ ಋಣ ತೀರಿಸಲಿಲ್ಲ ಎಂದು ಅರುಣ್ ಸಿಂಗ್ ಬಳಿ ದೂರಿದ್ದಾರೆ.ಬಹುಸಂಖ್ಯಾತ ಪಂಚಮಸಾಲಿ ಸಮಾಜ ಬಳಸಿಕೊಂಡು ಅಧಿಕಾರದ ಗದ್ದುಗೆ ಏರಿದ ಯಡಿಯೂರಪ್ಪ ಸಮಾಜದ ನಾಯಕರಲ್ಲಿ ಒಡಕು ಮೂಡಿಸುವ ಕೆಲಸ ಮಾಡಿರುವುದು ತಮಗೆ ಬೇಸರ ತರಿಸಿದೆ. ಮೀಸಲಾತಿ ಹೋರಾಟದಲ್ಲಿ ಮುಖ್ಯಮಂತ್ರಿಗಳ ಪುತ್ರ ವಿಜಯೇಂದ್ರ ಆಡಿದ ಮೋಸದ ಆಟ ಸಮಾಜ ಮರೆಯದಂತಾಗಿದೆ ಎಂದು ಪಂಚಮಸಾಲಿ ಸ್ವಾಮೀಜಿ ಅರುಣ್ ಸಿಂಗ್ ಬಳಿ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ.ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬದಲಾಯಿಸಿ ಪಂಚಮ ಸಾಲಿ ಸಮಾಜದ ಮುಖಂಡರಿಗೆ ನಾಯಕತ್ವದ ಜವಾಬ್ದಾರಿ ನೀಡಬೇಕು.ಇದಕ್ಕೆ ಸಮಾಜ ಸಮರ್ಥವಾಗಿದೆ ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
Check Also
ಜಿಲ್ಲಾ ಉಸ್ತುವಾರಿ ಕ್ಷೇತ್ರದಲ್ಲಿಯೇ ಕೈ ಅಭ್ಯರ್ಥಿ ವಿನೋದ ಅಸೂಟಿಗೆ ಹಿನ್ನಡೆ
Spread the loveಗೆಲುವು ಸಾಧಿಸುತಿದ್ದಂತೆ ದೆಹಲಿಗೆ ತೆರಳಿದ ಪ್ರಲ್ಹಾದ್ ಜೋಶಿ ವಿವಿಧ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆದ ನೂತನ ಸಂಸದರು …