Breaking News

ಮೀನಾ ಕೊಲೆಗಾರರಿಗೆ ಕಠೋರ ಶಿಕ್ಷೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love

ಮೀನಾ ಕೊಲೆಗಾರರಿಗೆ ಕಠೋರ ಶಿಕ್ಷೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಕೊಡಗು ಜಿಲ್ಲೆಯ
ಜಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೇಲ ದಿನಗಳ ಹಿಂದೆ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಕೊಡಲು ಆಗ್ರಹಿಸಿ ಅಲ್ಪಸಂಖ್ಯಾತ ಹಿಂದುಳಿದ ವರ್ಗಗಳ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ಬಳಿ ಮೀನಾ ಭಾವಚಿತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ದಿನವೇ ಬಾಲಕಿಯೊಂದಿಗೆ ನಿಗದಿಯಾಗಿದ್ದ ನಿಶ್ಚಿತಾರ್ಥ ಮುರಿದುಬಿದ್ದ ನಂತರ ಬಾಲಕಿಯ ಮನೆಗೆ ಹೋಗಿ ಪೋಷಕರ ಮೇಲೆ ಹಲ್ಲೆ ಮಾಡಿ ಬಾಲಕಿಯನ್ನು ಎಳೆದಾಡಿ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ ಅಂತಹ ಆರೋಪಿ ಬಗ್ಗೆ ಸರ್ಕಾರ ಗಂಭೀರ ತೆಗೆದುಕೊಳ್ಳಲಿಲ್ಲ. ಈ
ಹಿಂದೆ, ಆರೋಪಿ ಕೃತ್ಯ ಎಸಗಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ನಂತರ ಒತ್ತಡ ಬಂದ ಮೇಲೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಬಂಧಿಸಲಾಯಿತು.
ಪ್ರಾಥಮಿಕ ತನಿಖೆಯ ನಂತರ ಆರೋಪಿಯು ಬಾಲಕಿಯ ಕತ್ತರಿಸಿದ ತಲೆಯನ್ನು ಇಟ್ಟುಕೊಂಡಿದ್ದ ಸ್ಥಳಕ್ಕೆ ಪೊಲೀಸರನ್ನು ಕರೆದೊಯ್ದದ್ದು ಭಯಾನಕ ಆಗಿದೆ.
ಬಾಲಕಿಯನ್ನು ಕೊಂದ ನಂತರ ಘಟನಾ ಸ್ಥಳದಿಂದ 300 ಮೀಟರ್ ದೂರದಲ್ಲಿರುವ ಮಾವಿನ ಮರದ ಕೊಂಬೆಯ ಮೇಲೆ ಮೀನಾಳ ತಲೆಯನ್ನು ಇಟ್ಟಿದ್ದನು. ಆದ್ದರಿಂದ ಇಂತಹ ಭೀಕರ ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಅಹಿಂದ್ ಹುಬ್ಬಳ್ಳಿ ಧಾರವಾಡ
ಮಹಾನಗರ ಜಿಲ್ಲಾಧ್ಯಕ್ಷ ಬಾಬಾಜನ್ ಮುದೋಳ್, ಸಾಮಾಜಿಕ ಹೋರಾಟಗಾರ ರಾಜಶೇಖರ್ ಮೆಣಸಿನಕಾಯಿ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!