Breaking News

ರಜೆ ಮುಗಿಸಿ ಹಿಂದಿರುಗುವವರಿಗೆ ಹೆಚ್ಚುವರಿ ಬಸ್ ವ್ಯವಸ್ಥೆ

Spread the love

*ರಜೆ ಮುಗಿಸಿ ಹಿಂದಿರುಗುವವರಿಗೆ ಹೆಚ್ಚುವರಿ ಬಸ್ ವ್ಯವಸ್ಥೆ*

ಹುಬ್ಬಳ್ಳಿ : ಬಸವ ಜಯಂತಿ ಹಾಗೂ ಸರಣಿ ರಜೆ ಮುಗಿಸಿ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವವರು ಮತ್ತು ಇತರೆ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಮೇ 12 ರಂದು ಭಾನುವಾರ ಬೆಳಿಗ್ಗೆಯಿಂದ ತಡರಾತ್ರಿಯವರೆಗೆ 22 ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಮೇ 10ರಂದು ಶುಕ್ರವಾರ ಬಸವ ಜಯಂತಿ ಹಾಗೂ ಅಕ್ಷಯ ತೃತೀಯ, 11ರಂದು ಎರಡನೇ ಶನಿವಾರ ಹಾಗೂ 12ರಂದು ರವಿವಾರ ಸಾರ್ವಜನಿಕ ರಜೆ ಹಿನ್ನೆಲೆಯಲ್ಲಿ ದೂರದ ಊರುಗಳಲ್ಲಿ ನೆಲೆಸಿರುವ ಹಲವರು ಸ್ವಂತ ಊರುಗಳಿಗೆ ಆಗಮಿಸಿದ್ದರು. ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮದುವೆ,ಗೃಹ ಪ್ರವೇಶ ಮತ್ತಿತರ ಶುಭಕಾರ್ಯಗಳಿದ್ದವು. ಆದ್ದರಿಂದ ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ಹೆಚ್ಚಾಗಿತ್ತು. ಅದಕ್ಕೆ ತಕ್ಕಂತೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಯಿತು.

ರಜೆ ಮುಗಿಸಿಕೊಂಡು ತಮ್ಮ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವವರು ಮತ್ತು ಇತರ ಪ್ರಯಾಣಿಕರಿಂದಾಗಿ ಮೇ12ರಂದು ರವಿವಾರ ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣ ಹಾಗೂ ಗೋಕುಲರಸ್ತೆ ಬಸ್ ನಿಲ್ದಾಣಗಳಿಂದ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ವಿಭಾಗದ ಹಿರಿಯ ಅಧಿಕಾರಿಗಳು ಪ್ರಮುಖ ಬಸ್ ನಿಲ್ದಾಣಗಲ್ಲಿ ಹಾಜರಿದ್ದು ಮಧ್ಯಾಹ್ನದಿಂದ ತಡರಾತ್ರಿಯ ವರೆಗೆ ಹಾಗೂ 13ರಂದು ಸೋಮವಾರ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ನಡುವೆಯೂ ಸಹ ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಿದರು. ಮಲ್ಟಿ ಆ್ಯಕ್ಸಲ್ ವೋಲ್ವೋ, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ಒಟ್ಟಾರೆ 22 ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಓಡಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!