ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ
ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಳ್ಳುತ್ತಾರೆ
ನಂತರ ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಭವಿಷ್ಯ ನುಡಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,
ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ರಚನೆ ವಿಚಾರವಾಗಿ ಅವರು ಮಾತನಾಡಿದರು,
ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಳ್ಳುವುದು ಸತ್ಯ ಆದಾದ
ನಂತರ ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ
ಈ ಬಗ್ಗೆ ಹಿಂದೇನೂ ಹೇಳಿದ್ದೆ ಈಗಲೂ ಹೇಳ್ತಾ ಇದ್ದೇನೆ
ಲೋಕಸಭೆ ಚುನಾವಣೆ ಮುಗಿದ ಮೇಲೆ ನೀವೇ ಕಾಯ್ದುನೋಡಿ ಎಂದರು. ಇನ್ನು ಹಾಸನ ಸಂಸದ ಪ್ರಜ್ವಲ್ ಪೆನ್ ಡ್ರೈವ್ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟ ಅವರು
ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದವು
ದಿಕ್ಕು ತಪ್ಪಿಸುವ ಕೆಲಸ ಆಗಬಾರದು ಎಂದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದರು