Breaking News

ಅಂಜಲಿ ಕೊಲೆ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಗೆ ನಿದರ್ಶನ:ಅರವಿಂದ ಬೆಲ್ಲದ

Spread the love

ಅಂಜಲಿ ಕೊಲೆ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಗೆ ನಿದರ್ಶನ:ಅರವಿಂದ ಬೆಲ್ಲದ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಯುವತಿಯ ಕೊಲೆ ಪ್ರಕರಣ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಗೆ ನಿದರ್ಶನವಾಗಿದೆ‌ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ವಿಧಾನ ಸಭಾ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಆರೋಪಿಸಿದರು.
ಈ ಕುರಿತು ಹೇಳಿಕೆ ನೀಡಿರುವ ಅವರು
ಕೆಲ ದಿನಗಗಳ ಹಿಂದಷ್ಟೇ ನಗರದ ನೇಹಾ ಹಿರೇಮಠರ ಭೀಕರ ಹತ್ಯೆ ಪ್ರಕರಣ ನಡೆದಿತ್ತು. ಇದೀಗ ಅಂಜಲಿ ಅಂಬಿಗೇರ ಕೊಲೆ ನಡೆದಿದೆ.
ಇದರಿಂದ ಹೆಣ್ಣು ಹೆತ್ತವರು ಆತಂಕಪಡುವ ಸ್ಥಿತಿ ನಿರ್ಮಾಣ ಆಗಿದೆ.
ವಿದ್ಯಾಭ್ಯಾಸ, ಉದ್ಯೋಗಗಳಿಗೆ ಹೆಣ್ಣು ಮಕ್ಕಳನ್ನು ಕಳಿಸಲು ಹಿಂಜರಿಯುವಂತಾಗಿದೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ನಡೆಯುತ್ತಿರುವ ಯುವತಿಯರ ಕೊಲೆ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ನಗರದಲ್ಲಿ ಸಮಾಜ ಘಾತುಕ, ಕಾನೂನು ಬಾಹಿರ ‌ಚಟುವಟಿಕೆಗಳಲ್ಲಿ‌ ತೊಡಗಿರುವವರನ್ನು ಪೊಲೀಸರು ನಿಯಂತ್ರಿಸಲು ಆಸಕ್ತಿ ತೋರಿಸುತ್ತಿಲ್ಲ. ಶಾಲಾ-ಕಾಲೇಜು, ಮಹಿಳಾ ಉದ್ಯೋಗಿಗಳ ಸ್ಥಳಗಳಲ್ಲಿ ಪೊಲೀಸರು ಕಾಣಿಸಿಕೊಂಡರೆ ಕೆಲವು ಅಹಿತಕರ ಘಟನೆಗಳನ್ನು ತಡೆಯಲು ಸಾಧ್ಯ. ಆದರೆ, ಪೊಲೀಸರು ಈ ಕೆಲಸ ಮಾಡುತ್ತಿಲ್ಲ. ಇನ್ನೊಂದೆಡೆ ಪೊಲೀಸ್ ಠಾಣೆಗಳಲ್ಲಿ ಅಕ್ರಮ ದಂಧೆಯಲ್ಲಿ ತೊಡಗಿರುವವರು ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಪೊಲೀಸರ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವಂತಾಗಿದೆ.ಇಂತಹ ಪರಿಸ್ಥಿತಿಯಲ್ಲಿ ಕಾನೂನು ಉಲ್ಲಂಘಿಸುವವರಿಗೆ ಯಾವುದೇ ಭೀತಿ ಇಲ್ಲದಂತಾಗಿದೆ.
ಆದ್ದರಿಂದ ಅವಳಿ ನಗರದಲ್ಲಿ ಕಾನೂನು ಮೀರಿ ವರ್ತಿಸುವವರ ಕೃತ್ಯಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ.
ಪೊಲೀಸ್ ‌ಇಲಾಖೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು. ಸಮಾಜ ಘಾತುಕರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಈ ಮುಖಾಂತರ
ಜನತೆ ನಿರ್ಭೀತಿಯಿಂದ
ಜೀವಿಸುವ ವಾತಾವರಣವನ್ನು ಸರಕಾರ ಸೃಷ್ಠಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!