Breaking News

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ್ ಪ್ರಕರಣ: ಇಬ್ಬರು ಎನ್ ಐಎ ವಶಕ್ಕೆ

Spread the love

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ್ ಪ್ರಕರಣ: ಇಬ್ಬರು ಎನ್ ಐಎ ವಶಕ್ಕೆ

ಹುಬ್ಬಳ್ಳಿ,: ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಸಹೋದರರನ್ನ ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಎನ್​ಐಎ ಅಧಿಕಾರಿಗಳು ಹುಬ್ಬಳ್ಳಿಯ ಸಹೋದರಿಬ್ಬರಿಬ್ಬರು ಆಗಿದ್ದು ತಡರಾತ್ರಿವರೆಗೆ ವಿಚಾರಣೆ ನಡೆಸಿದರು.
ಹುಬ್ಬಳ್ಳಿಯ ಗೌಸಿಯಾ ಟೌನ್ ನಿವಾಸಿ, ಸಾಫ್ಟ್‌ವೇರ್ ಇಂಜಿನಿಯರ್ ಶೋಯೆಬ್‌ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಸದ್ಯ ಎನ್​ಐಎ ವಶದಲ್ಲಿದ್ದು, ಇವರಿಬ್ಬರೂ ವಿದೇಶಿ ಹ್ಯಾಂಡ್ಲರ್​ಗಳ ಸೂಚನೆಯಂತೆ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಹಾಗೂ ಮುಸಾವೀರ್ ಹುಸೇನ್​ಗೆ ಹಣ ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಎನ್​ಐಎ ಅಧಿಕಾರಿಗಳಿಗೆ ದೊರೆತಿದೆ. ಶೋಯೆಬ್‌ ಪತ್ನಿ ನಿವಾಸ ಬೆಳಗಾವಿಯಲ್ಲೂ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.
ಶೋಯೆಬ್‌ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಹಣ ಸಹಾಯ ಮಾಡಿದ್ದ ಬಗ್ಗೆ ಕೆಲ ಡಿಜಿಟಲ್ ಸಾಕ್ಷ್ಯಗಳು ಎನ್​ಐಎಗೆ ದೊರೆತಿವೆ. ಹಣ ಸಹಾಯದ ಬಗ್ಗೆ ಸಹೋದರರು ವಿದೇಶಿ ಹ್ಯಾಂಡ್ಲರ್​ನ ಜೊತೆ ಕೋಡ್​ ವರ್ಡ್​ನಲ್ಲಿ ಚಾಟಿಂಗ್ ಮಾಡಿದ್ದಾರೆ. ಇನ್ನು ರಾಮೇಶ್ವರಂ ಕೆಫೆ ಸ್ಫೋಟ ಬಳಿಕ ಆರೋಪಿ ಮುಸಾವೀರ್ ಹುಬ್ಬಳ್ಳಿಗೆ ಭೇಟಿ ನೀಡಿ, ಇಲ್ಲಿ ಹಣ ಪಡೆದು ಪಶ್ಚಿಮ ಬಂಗಾಳಕ್ಕೆ ತೆರಳಿರುವ ಅನುಮಾನ ಎನ್​ಐಎ ಅಧಿಕಾರಿಗಳಲ್ಲಿ ಮೂಡಿದೆ. ಹೀಗಾಗಿ‌ ಸಹೋದರರಿಬ್ಬರನ್ನು ಹುಬ್ಬಳ್ಳಿ ಇಂದಿರಾನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಎನ್​ಐಎ ಅಧಿಕಾರಗಳು ತೀವ್ರ ವಿಚಾರಣೆ ನಡೆಸಿದರು.
ರಾಮೇಶ್ವರಂ ಕೆಫೆ ಸ್ಫೋಟ
ಮಾರ್ಚ್ 1 ರಂದು ಮಧ್ಯಾಹ್ನ 12:55 ರ ಸುಮಾರಿಗೆ ವೈಟ್​ಫೀಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲಾಗಿತ್ತು. ಕೃತ್ಯ ಎಸಗಿದ ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ ಅನ್ನು ಎನ್​ಐಎ ಅಧಿಕಾರಿಗಳು, ಘಟನೆ ನಡೆದು 43 ದಿನಗಳ ಬಳಿಕ, ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು. ಬಂಧಿತರ ವಿಚಾರಣೆ ನಡೆಸಿದ್ದು ಬೆಚ್ಚಿ ಬೀಳಿಸುವ ಸಂಗತಿ ಬಯಲಾಗಿದ್ದವು.
ವಿಚಾರಣೆ ವೇಳೆ ಹಲವು ವಿಚಾರ ಬಯಲು ಎನ್ಐಎ ವಿಚಾರಣೆ ವೇಳೆ ಬಾಂಬರ್ ಮುಸಾವೀರ್ ಹಾಗೂ ಮತೀನ್ ತಾಹ ಆಘಾತಕಾರಿ ಸತ್ಯ ಹೊರಹಾಕಿದ್ದರು.


Spread the love

About Karnataka Junction

    Check Also

    ಲೈಂಗಿಕ ದೌರ್ಜನ್ಯ, ಕೊಲೆಗೆ ಯತ್ನ, ಸಿಆರ್‌ಪಿಎಫ್‌ ನೌಕರನ ಮೇಲೆ ಮಹಿಳೆಯಿಂದ ದೂರು

    Spread the loveಲೈಂಗಿಕ ದೌರ್ಜನ್ಯ, ಕೊಲೆಗೆ ಯತ್ನ, ಸಿಆರ್‌ಪಿಎಫ್‌ ನೌಕರನ ಮೇಲೆ ಮಹಿಳೆಯಿಂದ ದೂರು ಹುಬ್ಬಳ್ಳಿ: ಸಿಆರ್‌ಪಿಎಫ್‌ನಲ್ಲಿ ಕೆಲಸ ಮಾಡುತ್ತಿರುವ …

    Leave a Reply

    error: Content is protected !!