ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ತಂಪುಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರಕಾರಿ
ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.
Check Also
ಆಕಾಶ್ ನಿಂದ (ಎಇಎಸ್ ಎಲ್) ನ ಅಂತೆ 2024 ಪರೀಕ್ಷೆ ಘೋಷಣೆ
Spread the loveಹುಬ್ಬಳ್ಳಿ : ಆಕಾಶ್ ಎಜುಕೇಶನ್ ಸರ್ವೀಸಸ್ ಲಿಮಿಟೆಡ್ (AESL) ತನ್ನ ಮಹತ್ವಾಕಾಂಕ್ಷೆಯ ವಿದ್ಯಾರ್ಥಿವೇತನ ಪರೀಕ್ಷೆಯಾದ ಆಕಾಶ್ ನ್ಯಾಷನಲ್ …