Breaking News

ಪ್ರವಾಹ ಪರಿಹಾರ ಕೈಗೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಆದೇಶ

Spread the love

ಹುಬ್ಬಳ್ಳಿ; ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯಿಂದ ಉಂಟಾಗುವ ಪ್ರವಾಹದಿಂದ ಪರಿಹಾರ ಕೈಗೊಳ್ಳಲು ಉಸ್ತುವಾರಿಗಾಗಿ ಎಲ್ಲಾ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಆದೇಶಿಸಿದ್ದಾರೆ.
ಧಾರವಾಡ ತಾಲೂಕಿಗೆ ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ.ಬಿ., ಹುಬ್ಬಳ್ಳಿ ತಾಲೂಕಿಗೆ ಉಪ ಕೃಷಿ ನಿರ್ದೇಶಕಿ ಆರ್. ಸ್ಮೀತಾ, ಹುಬ್ಬಳ್ಳಿ ನಗರಕ್ಕೆ ಹು-ಧಾ ಮಹಾನಗರ ಪಾಲಿಕೆಯ ಜಂಟಿ ಆಯುಕ್ತ ಸಮೀರ ಮುಲ್ಲಾ, ನವಲಗುಂದ ತಾಲೂಕಿಗೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಹಿರಿಯ ಉಪ ನಿರ್ದೇಶಕಿ ಪ್ರೀತಿ ದೊಡಮನಿ, ಕುಂದಗೋಳ ತಾಲೂಕಿಗೆ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ, ಕಲಘಟಗಿ ತಾಲೂಕಿಗೆ ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನಾಧಿಕಾರಿ ಶಿವಾನಂದ ಭಜಂತ್ರಿ, ಅಳ್ನಾವರ ತಾಲೂಕಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ, ಅಣ್ಣಿಗೇರಿ ತಾಲೂಕಿಗೆ ರಾಷ್ಟ್ರೀಯ ಹೆದ್ದಾರಿ-63 ವಿಶೇಷ ಭೂ ಸ್ವಾಧೀನಾಧಿಕಾರಿ ವಿದ್ಯಾಧರ ಗುಳಗುಳಿ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಆದೇಶ ಹೋರಡಿಸಿದ್ದಾರೆ.


Spread the love

About Karnataka Junction

[ajax_load_more]

Check Also

*ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ ‌ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ- ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ

Spread the loveಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಲವಂತವಾಗಿ ಬಂದ್ ಮಾಡಿಸುವ …

Leave a Reply

error: Content is protected !!