ಹುಬ್ಬಳ್ಳಿ;
ಲೋಕಾಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ ಅವರು ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಕೂಡಲೇ ಅವರನ್ನು ಸೇವೆಯಿಂದ ವಜಾಮಾಡಬೇಕೆಂದು ಜೆಡಿಎಸ್ ಮುಖಂಡ ಶ್ರೀಶೈಲ ಮೂಲಿಮನಿ ಒತ್ತಾಯಿಸಿದರು.
ಇಲ್ಲಿನ ತಾಲ್ಲೂಕ ಆಡಳಿತದ ಆವರಣದಲ್ಲಿ ತಹಶೀಲ್ದಾರ್ ಸುಧೀರ ಸಾವಕಾರ ಮುಖಾಂತರ ರಾಜ್ಯಪಾಲ ತಾವರಚಂದ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಮಂತ್ರಿ ಅವರ ಪರಿಸ್ಥಿತಿ ಹೀಗಾದರೆ ಇನ್ನು ಜನಸಾಮಾನ್ಯರ ಗತಿ ಏನು, ತಕ್ಷಣ ಅವರ ಮೇಲೆ ಉನ್ನತ ಮಟ್ಟದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದೆ ರಾಜ್ಯದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಆಗ್ರಹ ಪಡಿಸಿದರು.
ಈ ವೇಳೆ ಜೆಡಿಎಸ್ ತಾಲ್ಲೂಕ ಅಧ್ಯಕ್ಷ ಫಕೀರಗೌಡ ದೊಡ್ಡಮನಿ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಜಿ ಎನ್ ತೋಟದ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಹಡಪದ, ತಾಲ್ಲೂಕ ಪ್ರಧಾನಕಾರ್ಯದರ್ಶಿ ಮೈಲಾರಪ್ಪ ವೈದ್ಯ ಉಪಸ್ಥಿತರಿದ್ದರು.