ಕನ್ನಡ ನಾಡು ನುಡಿ ನೆಲ ಜಲದ ಬಗ್ಗೆ ಅಪಾರ ಗೌರವ ಹೊಂದಿದ ಕಳೆದ ಮೂರುವರೆ ದಶಕದಿಂದ ಸಾಮಾಜಿಕ ರಂಗದಲ್ಲಿ ಹೋರಾಟ ಮಾಡುತ್ತಿರುವ ಕಾಂಗ್ರೆಸ್ ನ ಕಟ್ಟಾಳು ರಾಜ್ಯದ ಗಡಿಯಿಂದ ಗಡಿ ವರೆಗಿನ ಸಮಸ್ಯೆಗಳ ಬಗ್ಗೆ ಸುದೀರ್ಘ ಹೋರಾಟ ಮಾಡುತ್ತಿರುವ ಕರ್ನಾಟಕ ರಾಜ್ಯದ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶಕ ಮಂಡಳಿ ಸದಸ್ಯ ಹಾಗೂ ಇತ್ತೀಚೆಗೆ ಬೀದರ ಬಸವಕಲ್ಯಾಣದಲ್ಲಿ ಬೆಂಗಳೂರಿನ ಬಸವಗಂಗೋತ್ರಿ ಮಹಾಪೀಠದ ಜಗದ್ಗುರು ಶ್ರೀ ಚನ್ನಬಸವಾನಂದ ಮಹಾಸ್ವಾಮಿಗಳ ಸಾನಿಧ್ಯ ಮತ್ತು ನೇತೃತ್ವದಲ್ಲಿ ಜರುಗಿದ ಕಲ್ಯಾಣ ಪರ್ವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಸವದಳದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಶ್ರೀ ಗಂಗಾಧರ ದೊಡ್ಡವಾಡ ರವರನ್ನು ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ದೂರದರ್ಶನ ಕೇಂದ್ರದ ನಿವೃತ್ತ ಮಹಾ ನಿರ್ದೇಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀ ಮಹೇಶ ಜೋಶಿ ಶಾಲು ಹೊಂದಿಸಿ ಸನ್ಮಾನಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ನಾಡೋಜ ಮಹೇಶ ಜೋಶಿ ಶ್ರೀ ಗಂಗಾಧರ ದೊಡ್ಡವಾಡ ರವರು ಅಣ್ಣ ಬಸವಣ್ಣನವರ ಸಾಮಾಜಿಕ ನ್ಯಾಯದ ಅಡಿಯಲ್ಲಿ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಯಾರೊಂದಿಗೂ ರಾಜಿ ಇಲ್ಲದೆ ಹೋರಾಡುತ್ತಿರುವರು ಇಂಥವರನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಗುರುತಿಸಿ ಗೌರವಿಸಬೇಕಾದದ್ದು ಅತ್ಯವಶ್ಯವಾಗಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಮಂಡ್ಯ ಸಾಹಿತ್ಯ ಸಮ್ಮೇಳನದ ಸಂಚಾಲಕಿ ಶ್ರೀಮತಿ ಮೀರಾ ಶಿವಲಿಂಗಯ್ಯ ಖ್ಯಾತ ಪತ್ರಕರ್ತ ಮಂಡ್ಯ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಎಚ್ಎಸ್ ಮುದ್ದೇಗೌಡ ನೇ ಭ ರಾಮಲಿಂಗ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
Check Also
ಪಕ್ಷೇತರ ಅಭ್ಯರ್ಥಿ ಜಿ ಜಿ ದ್ಯಾವನಗೌಡ್ರ ಕಣದಲ್ಲಿ ಮುಂದುವರೆಯಲು ನಿರ್ಧಾರ ?
Spread the loveಹುಬ್ಬಳ್ಳಿ: .ಶಿಗ್ಗಾವ ಸವಣೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ ನಡೆದಿದ್ದು ಯಾವುದೇ …