https://youtu.be/Q45L9Nk6pqQ
ಹುಬ್ಬಳ್ಳಿ: ಪ್ರಧಾನಿ ಮಂತ್ರಿಯವರ ಆಶ್ವಾಸನೆಯಂತೆ ದೇಶದಾದ್ಯಂತ ಬೃಹತ್ ಪ್ರಮಾಣದಲ್ಲಿ ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ ನೀಡಲಾಗಿದೆ. ಕೋವಿಡ್ ಲಸಿಕೆ ಪಡೆಯಲು ಹಿಂಜರಿಕೆ ಬೇಡ ಎಂದು
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ ಕಾರವಾರ ರಸ್ತೆಯ ಹಳೇ ಸಿ.ಆರ್.ಮೈದಾನದಲ್ಲಿ ಪೋಲಿಸ್ ಕುಟುಂಬ ವರ್ಗದರಿಗಾಗಿ ಆಯೋಜಿಸಲಾಗಿದ್ದ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆರಂಭದಲ್ಲಿ ಕೋವಿಡ್ ಲಸಿಕೆ ಬಂದಾಗ ಅಪಪ್ರಚಾರ ಕೈಗೊಳ್ಳಲಾಗಿತ್ತು. ಇದರಿಂದಾಗಿ ಹಲವು ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದರು. ಕೋವಿಡ್ ಎರಡನೇ ಅಲೆ ತೀವ್ರವಾಗಿ ಹಾನಿ ಉಂಟುಮಾಡಿದ ಬಳಿಕ ಜನರಲ್ಲಿ ಎಚ್ಚರಿಕೆ ಮೂಡಿದೆ.ಲಸಿಕೆ ಪಡೆಯಲು ಮುಂದೆ ಬರುತ್ತಿದ್ದಾರೆ. ಲಸಿಕಾಕರಣವನ್ನು ರಾಜ್ಯ ಅಥವಾ ಕೇಂದ್ರ ಸರ್ಕಾರಗಳಲ್ಲಿ ಯಾರು ಕೈಗೊಳ್ಳಬೇಕು ಎಂಬುದರ ಬಗ್ಗೆ ಗೊಂದಲವಿತ್ತು. ಸದ್ಯ ಕೇಂದ್ರ ಸರ್ಕಾರವೇ +18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಮುಂದೆ ಬಂದಿದೆ.
ಧಾರವಾಡ ಜಿಲ್ಲೆಯಲ್ಲಿ 201 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಲಸಿಕಾ ಮೇಳದ ಆರಂಭದ ದಿನವಾದ ಇಂದು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಟ್ಟು 50480 ಲಸಿಕೆ ಲಭ್ಯವಿದ್ದು 27000 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಸ್ವತಃ ನಾನು ಕೋವಿಡ್ ಲಸಿಕೆ ಎರಡೂ ಡೋಸ್ ಪಡೆದಿದ್ದೇನೆ. ಯಾವುದೇ ಅಡ್ಡಪರಿಣಾಮ ಉಂಟಾಗಿಲ್ಲ. ಲಸಿಕೆ ನಿಮ್ಮಮ್ನ ಕೋವಿಡ್‌ನಿಂದ ರಕ್ಷಿಸುತ್ತದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಕೊವಿಡ್ ನಿರ್ವಹಣೆ ಮಾಡುತ್ತಾದ್ದಾರೆ. ಪೊಲೀಸ್ ಆಯುಕ್ತ ಬೇಡಿಕೆಯಂತೆ ಪೊಲೀಸ್ ಕುಟುಂಬ ವರ್ಗದವರಿಗೂ ಇಂದು ಲಸಿಕೆ ಹಾಕಲಾಗುತ್ತಿದೆ. ಸಂಜೆ ವೇಳೆ 1000 ಜನರು ಲಸಿಕೆ ಪಡೆಯುವ ವಿಶ್ವಾಸವಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಈ ಸಂದರ್ಭದಲ್ಲಿ ಜಿ್ಲ್ಲಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಲಾಭುರಾಮ್, ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಆರ್.ಸಿ.ಹೆಚ್.ಓ ಡಾ.ಎಸ್.ಎಮ್.ಹೊನಕೇರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.