Breaking News

ರೈತರ ಬೆಳೆಗೆ ಉತ್ತಮ ದರಕ್ಕಾಗಿ ಭೂಮಿ ಆಪ್‌ ರಚನೆ; ರಘುನಂದನ್

Spread the love

ಹುಬ್ಬಳ್ಳಿ ಗ್ರಾಮೀಣ ಭಾಗದ ರೈತರಿಗೆ ಗುಣಮಟ್ಟದ ಬೆಳೆ ಬೆಳೆಯಲು ಹಾಗೂ ಬೆಳೆದ ಬೆಳೆಗಳಿಗೆ ಉತ್ತಮ ದರ ನೀಡುವ ಉದ್ದೇಶದಿಂದ ಖರೀದಿದಾರರನ್ನು ಆಕರ್ಷಿಸಲು ಭೂಮಿ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರಘುನಂದನ್‌ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ರೈತರು ಬೆಳೆಯುವ ಬೆಳೆಗಳ ನಿರ್ವಹಣೆ ಹಾಗೂ ಮಾರಾಟ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ. ದರ ಸಮರದ ನಡುವೆ ದಲ್ಲಾಳಿಗಳ ಕಾಟದಿಂದ ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರೆಯುತ್ತಿಲ್ಲ. ಇದರಿಂದಾಗಿ ರೈತರಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ರೈತನ ಯಶಸ್ಸೇ ನಮ್ಮ ಯಶಸ್ಸು ಎಂಬ ಧೈಯದೊಂದಿಗೆ ಈ ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ ಎಂದರು.
ಈಗಾಗಲೇ ಆ್ಯಪ್ ನ್ನು ರೈತರಿಗೆ ಅನುಕೂಲವಾಗುವಂತೆ ಮೊಬೈಲ್ ಪ್ಲೇ ಸ್ಟೋರ್’ ನಲ್ಲಿ ಬಿಡುಗಡೆ ಮಾಡಲಾಗಿದೆ. ರೈತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಾವಿರಾರು ರೈತರು ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಂಡು ಬೆಳೆಗಳು, ಹಾಗೂ ಬೆಲೆಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದಾರೆ. ತರಕಾರಿ, ಕಾಳುಗಳು ಸೇರಿದಂತೆ ರೈತ ಬೆಳೆಯುವ ಎಲ್ಲ ದವಸ ಧಾನ್ಯಗಳ ಮಾಹಿತಿ ಈ ಆ್ಯಪ್‌ನಲ್ಲಿ ಲಭ್ಯವಾಗಲಿದೆ. ದಿನದಿಂದ ದಿನಕ್ಕೆ ಬದಲಾಗುವ ಮಾರುಕಟ್ಟೆಯ ಬೆಲೆಯನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹನುಮೇಶ ಯಾವಗಲ್ ಇದ್ದರು.


Spread the love

About Karnataka Junction

[ajax_load_more]

Check Also

ಬಸ್ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ

Spread the loveಹುಬ್ಬಳ್ಳಿ: ಸಾರಿಗೆ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ …

Leave a Reply

error: Content is protected !!