ಹುಬ್ಬಳ್ಳಿ : ಸಾಂಬಾರು ಪದಾರ್ಥ ಸೇರಿದಂತೆ ಇತರ ಕೃಷಿ ಉತ್ಪನ್ನಗಳನ್ನು ರಫ್ತು ಮಾಡುವ ಮಾಹಿತಿಯನ್ನು ರೈತರಿಗೂ ಒದಗಿಸಬೇಕು. ಮುಂಬರುವ ದಿನಗಳಲ್ಲಿ ರೈತರು ತಮ್ಮ ಉತ್ಪನ್ನವನ್ನು ತಾವೇ ರಫ್ತು ಮಾಡುವಂತಾಗಲಿ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಹಾಗೂ ಕೊಚ್ಚಿನ್‌ನ ಭಾರತೀಯ ಸಾಂಬಾರು ಮಂಡಳಿ ಸಹಯೋಗದಲ್ಲಿ ತೋಟಗಾರಿಕೆ ಇಲಾಖೆ ನಗರದಲ್ಲಿ ಆಯೋಜಿಸಿದ್ದ ಸಾಂಬಾರು ಪದಾರ್ಥಗಳ ಖರೀದಿದಾರರ ಮತ್ತು ಮಾರಾಟಗಾರರ ಸಮಾವೇಶದ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ರೈತರ ಮಕ್ಕಳು ಸುಶಿಕ್ಷಿತರಾಗಿದ್ದಾರೆ. ಅವರಿಗೆ ರಫ್ತು ವ್ಯಾಪಾರದ ಮಾಹಿತಿ ಒದಗಿಸಬೇಕು. ಇದರಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಬೆಳೆಯುವ ಕೆಲವು ಉತ್ಪನ್ನಗಳನ್ನು ಹೊರ ರಾಜ್ಯಗಳಿಗೆ ಮಾರಾಟ ಮಾಡಿ, ಅಲ್ಲಿನ ಜನರು ಅದೇ ಉತ್ಪನ್ನಗಳನ್ನು ಹೊರ ದೇಶಗಳಿಗೆ ರಫ್ತು ಮಾಡಿ, ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಇಲ್ಲಿಯವರಿಗೆನೇ ರಫ್ತು ಬಗ್ಗೆ ಅರಿವು ಇದ್ದರೆ, ಇಲ್ಲಿನ ರೈತರು ಹಾಗೂ ವ್ಯಾಪಾರಸ್ಥರು ಆರ್ಥಿಕವಾಗಿ ಬೆಳೆಯಲು ಅವಕಾಶ ಸಿಕ್ಕಂತಾಗುತ್ತದೆ ಎಂದರು.
ಸಾಂಬಾರು ಪದಾರ್ಥಗಳ ವ್ಯಾಪಾರದ ನೆಪದಲ್ಲಿ ಭಾರತಕ್ಕೆ ಕಾಲಿಟ್ಟಿದ್ದ ಬ್ರಿಟೀಷರು ನಮ್ಮ ದೇಶವನ್ನು ನೂರಾರು ವರ್ಷ ಆಳಿದರು. ಇದೀಗ ಇಡೀ ವಿಶ್ವದಲ್ಲಿಯೇ ಭಾರತ ಸಾಂಬಾರು ಪದಾರ್ಥಗಳ ರಸ್ತಿನಲ್ಲಿ ಮುಂಚೂಣಿಯಲ್ಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಪದಾರ್ಥಗಳನ್ನು ರಫ್ತು ಮಾಡಲಾಗಿದ್ದು, ಇದರಿಂದ 36,956 ಕೋಟಿ ರೂ. ವ್ಯವಹಾರ ಆಗಿದೆ. ಮುಂದಿನ ವರ್ಷದಲ್ಲಿ 1 ಲಕ್ಷ ಕೋಟಿ ರೂ. ಮೊತ್ತದ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಗುರಿ ಇಟ್ಟಕೊಳ್ಳಲಾಗಿದೆ ಎಂದರು.
ಸಮಾವೇಶ ಉದ್ಘಾಟಿಸಿ ಮಾತನಾಡಿದ ಶಾಸಕ ಎಂ.ಆರ್. ಪಾಟೀಲ, ಸಾಂಬಾರು ಪದಾರ್ಥಗಳಿಗೆ ತಗಲುವ ರೋಗ, ನಿರ್ವಹಣೆ ಬಗ್ಗೆ ರೈತರಿಗೆ ಅಗತ್ಯ ಮಾಹಿತಿ ನೀಡಬೇಕು ಎಂದು ಹೇಳಿದರು.
ಅತಿಥಿಯಾಗಿದ್ದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಉತ್ತಮ ಆಹಾರ ಸೇವನೆಯಿಂದ ಆರೋಗ್ಯಯುತ ಜೀವನ ನಡೆಸಲು ಸಾಧ್ಯ. ಹಾಗಾಗಿ, ಗುಣಮಟ್ಟದ ಕೃಷಿ ಉತ್ಪನ್ನಗಳು ಸ್ಥಳೀಯರಿಗೂ ಲಭಿಸುವಂತಾಗಲಿ ಎಂದರು.
ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಿ.ಆರ್. ಗಿರೀಶ ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಾವೇರಿಯ ಜವಾರಿ ಫುಡ್ ಮುಖ್ಯಸ್ಥರಾದ ಚನ್ನಯ್ಯ ಎಮ್ಮೆಟ್ಟಿ ಹಿರೇಮಠ, 8 ದೇಶಗಳಿಗೆ ಜೋಳದ ಹಾಗೂ ಸಜ್ಜಿ ರೊಟ್ಟಿ ರಫ್ತು ಮಾಡುತ್ತಿರುವುದಾಗಿ ತಿಳಿಸಿದರು. ಉತ್ತರ ಕರ್ನಾಟಕದ ಹೊಸ ರಫ್ತುದಾರರಿಗೆ ಹುಬ್ಬಳ್ಳಿಯಲ್ಲಿಯೇ ತರಬೇತಿ ನೀಡಬೇಕು ಎಂದು ಮನವಿ ಮಾಡಿದರು.
‘ಸಾಂಬಾರು ಬೆಳೆಗಳಲ್ಲಿ ಸಮಗ್ರ ರೋಗ ಮತ್ತು ಕೀಟ ಬಾಧೆಗಳ ನಿರ್ವಹಣೆ ‘ ಕುರಿತ ಕಿರು ಹೊತ್ತಿಗೆಯನ್ನು ಶಾಸಕರಾದ ಮಹೇಶ ಟೆಂಗಿನಕಾಯಿ ಹಾಗೂ ಎಂ.ಆರ್. ಪಾಟೀಲ ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು.
ಪ್ರಧಾನ ವ್ಯವಸ್ಥಾಪಕ ಎಚ್.ಆರ್. ನಾಯ್ಕ, ಸಕಲೇಶಪುರದ ಸಾಂಬಾರು ಮಂಡಳಿ ಉಪ ನಿರ್ದೇಶಕ ಎಂ.ವೈ. ಹೊನ್ನೂರ, ಜಂಟಿ ನಿರ್ದೇಶಕ ಗಿರೀಶ್,
ಹಿರಿಯ ಅಧಿಕಾರಿಗಳಾದ ಟಿ.ಎನ್. ಜ್ಞಾ, ಸಿದ್ದರಾಮಯ್ಯ ಬರ್ಲಿಮಠ ಹಾಗೂ ಇತರರು ಉಪಸ್ಥಿತರಿದ್ದರು.
Check Also
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ – ರಾಜಣ್ಣ ಕೊರವಿ
Spread the loveಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ ಆಗಿದೆ ಎಂದು ಶ್ರೀ …