ಜೂ7 ರಿಂದ ಲಾಕ್‌ಡೌನ್ ನಲ್ಲಿ ವಿನಾಯಿತಿ : ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ಸೇವೆಗಳಿಗೆ ಅನುಮತಿ- ದೇಶಪಾಂಡೆನಗರದ ಐಬಿಯಲ್ಲಿ ಸಚಿವರ ಉಪಸ್ಥಿತಿಯಲ್ಲಿ ನಿರ್ಣಯ

Spread the love

ಜೂ7 ರಿಂದ ಲಾಕ್‌ಡೌನ್ ನಲ್ಲಿ ವಿನಾಯಿತಿ

ಹುಬ್ಬಳ್ಳಿ; ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಖಚಿತತೆ ಪ್ರಮಾಣ ಇಳಿಮುಖವಾಗುತ್ತಿದೆ. ರಾಜ್ಯ ಸರ್ಕಾರ ಜೂ.14 ರವರೆಗೆ ಲಾಕ್‌ಡೌನ್‌ ಮುಂದುವರಿಸಲು ಸೂಚಿಸಿದೆ. ಬರುವ 7 ನೇ ತಾರೀಖಿನಿಂದ (ಸೋಮವಾರ) ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮಗಳಲ್ಲಿ ಅಲ್ಪ ವಿನಾಯಿತ ನೀಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ‌ ತೀರ್ಮಾನಿಸಲಾಯಿತು.
ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‌ನಲ್ಲಿ ಜರುಗಿದ ಸಭೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭುರಾಮ, ಜಿ.ಪಂ.ಸಿಇಓ ಡಾ.ಬಿ.ಸುಶೀಲ, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸದ್ಯ ಹಾಲು ತರಕಾರಿ ಸೇವೆಗಳಿಗೆ ಮಾತ್ರ ಬೆಳಿಗ್ಗೆ 6 ರಿಂದ 8 ಗಂಟೆವರೆಗೆ ಅವಕಾಶವಿದೆ. ಈ ಸಮಯವನ್ನು ಬೆಳಿಗ್ಗೆ 10 ಗಂಟೆವರೆಗೆ ವಿಸ್ತರಿಸಿ ಹಾಲು‌,ತರಕಾರಿ, ಕಿರಾಣಿ ಅಂಗಡಿ, ಹೋಟಲ್ ಹಾಗೂ ಮದ್ಯ ಅಂಗಡಿಗಳಲ್ಲಿ ಪಾರ್ಸಲ್ ಸೇವೆಗೆ ಅವಕಾಶ ನೀಡಿ.‌ ಹೋಟೆಲ್‌ಗಳ ಮೂಲಕ ಹೋಮ್ ಡಿಲೆವರಿಗೆ ರಾತ್ರಿ 8 ವರೆಗೆ ಸಮಯಾಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚಿಸಿದರು.
ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಲಸಿಕೆಕಾರ್ಯ ಚುರುಕುಗೊಳ್ಳಬೇಕು. ಸರ್ಕಾರದ ಪರಿಷ್ಕೃತ ಆದೇಶದಂತೆ ಆದ್ಯತೆ ಮತ್ತು ದುರ್ಬಲ ವರ್ಗದವರಿಗೆ ಕಡ್ಠಾಯವಾಗಿ ಲಸಿಕೆ ನೀಡಿಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು‌.
ಜಿಲ್ಲೆಯಲ್ಲಿ ಬೆಳೆ ವಿಮೆ ಮತ್ತು ಪರಿಹಾರ ಕಾರ್ಯಪೂರ್ಣಗೊಂಡಿದೆ. ತಾಂತ್ರಿಕ ಕಾರಣಗಳಿಂದ ವಿಮೆ ಲಭಿಸದರ ವಿವರ ಪಡೆಯಲಾಗಿದೆ. ಆಯಾ ತಾಲೂಕು ಮಟ್ಟದ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಲಿದ್ದಾರೆ.
ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಹಣ್ಣು ಬೆಳೆಗಾರರಿಗೆ ರೂ. 1,08,64,487 ಹಾಗೂ ತರಕಾರಿ ಬೆಳಗಾರಿಗೆ ರೂ.55,400 ಬಿಡುಗಡೆಯಾಗಿದೆ. ಹೂ ಬೆಳೆಗಾರರಿಗೆ ರೂ.10,73,529 ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವರ್ತುಲ ರಸ್ತೆ‌ ಕಾಮಗಾರಿ ತ್ವರಿತ ರೀತಿಯಲ್ಲಿ ಕೈಗೊಳ್ಳುವಂತೆ ಸಂಬಂಧ ಪಟ್ಟ ಇಂಜಿನಿಯರ್‌ಗಳಿಗೆ ಸೂಚಿಸಲಾಯಿತು. ಕಿಮ್ಸ್ ಆವರಣದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುವ ತಾಯಿ ಮತ್ತು ಮಕ್ಕಳ ಹಾರೈಕೆ ಆಸ್ಪತ್ರೆ ಕಿಮ್ಸ್‌ಗೆ ಹಸ್ತಾಂತರಿಸುವಂತೆ ನಿರ್ದೇಶನ ನೀಡಲಾಯಿತು.
ವಾ.ಕ.ರ.ಸಾ.ಸಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಯಶವಂತ ಮದೀನಕರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About gcsteam

    Check Also

    ಸ್ವಾತಂತ್ರ್ಯದ ಸ್ವಾತಂತ್ರ್ಯ ಉಸಿರಾಟ ಮಾಡುತಿದ್ದರೆ ಕಾಂಗ್ರೆಸ್ ಕಾರಣ- ಸಿದ್ದರಾಮಯ್ಯಾ

    Spread the loveಇಂದು ನಮಗೆ ಸಿಕ್ಕಿದ್ದರೆ, ಸ್ವಾತಂತ್ರ್ಯದ ಫಲವನ್ನ ,ಸ್ವಾತಂತ್ರ್ಯ ಉಸಿರಾಟವನ್ನು ಉಸಿರಾಟ ಮಾಡುತಿದ್ದರೆ ಇದಕ್ಕೆ ಕಾಂಗ್ರೆಸ್ ಪಕ್ಷ ವೇ …

    Leave a Reply