ಹುಬ್ಬಳ್ಳಿ: ಸಾರಿಗೆ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹುಬ್ಬಳ್ಳಿ ಮಹಾನಗರದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಪ್ರಯಾಣ ದರ ಹೆಚ್ಚಳ ಮಾಡುವುದರ ಮೂಲಕ ಬಡ, ಕೂಲಿ- ಕಾರ್ಮಿಕರು, ಮಧ್ಯಮವರ್ಗದ ಜನರಿಗೆ ಹೊರೆ ಹೇರಿದಂತಾಗಿದೆ. ಸಾವಿರಾರು ಜನರು ಸರ್ಕಾರಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಆದರೆ ಶೇ. 15ರಷ್ಟು ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದರ ಮೂಲಕ ಆರ್ಥಿಕ ಹೊರೆಯನ್ನು ಜನಸಾಮಾನ್ಯರ ಮೇಲೆ ರಾಜ್ಯ ಸರ್ಕಾರ ಹೇರಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.
ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ರವಾನಿಸಲಾಯಿತು. ಎಬಿವಿಪಿ ಮಹಾನಗರ ಕಾರ್ಯದರ್ಶಿ ಸಿದ್ದಾರ್ಥ ಕೋರಿ, ಸಹ ಕಾರ್ಯದರ್ಶಿ ದಾನೇಶ ಕಿತ್ತೂರ, ರಕ್ಷಿತಾ ಚಂಡಕೆ, ಸಂಜಯ ಉದ್ದೂರು, ಅನ್ನೋಲ್ ಕಲಬುರ್ಗಿ, ವಿಕ್ರಮ್ ಗಳಂದೇ, ವರುಣ ಪಾಗದ ಇದ್ದರು.
