Breaking News

ಸಾರಿಗೆ ನೌಕರರ ಬೇಡಿಕೆ ಸಿಎಂ ಈಡೇರಿಸಲೇಬೇಕು

Spread the love

ಹುಬ್ಬಳ್ಳಿ: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆ ಭರವಸೆಯಂತೆ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಡೇರಿಸಬೇಕು, ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆಗ್ರಹಿಸಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಯ ನೌಕರರು ರಾಜ್ಯಾದ್ಯಂತ ಮುಷ್ಕರ ಹೂಡಿದಾಗ ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಈ ಬೇಡಿಕೆಗಳನ್ನು ಏಕೆ ಈಡೇರಿಸಲು ಆಗುವುದಿಲ್ಲ? ಎಂದು ಪ್ರಶ್ನಿಸಿ ಅಧಿಕಾರಕ್ಕೆ ಬಂದರೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಈಗ ನೌಕರರ ವೇತನ ಪರಿಷ್ಕರಣೆ ಮಾಡಲು ಚೌಕಾಶಿ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಸಿಎಂ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಬಜೆಟ್ ನಲ್ಲಿ ಘೋಷಣೆ ಆಗದೇ ಹೋದರೆ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಎಚ್ಚರಿಸಿದರು.
ನೌಕರರಿಗೆ ಹಿಂಸೆ:
ನವಲಗುಂದ ಘಟಕದ ನಿರ್ವಾಹಕರೊಬ್ಬರಿಗೆ ಹಿರಿಯ ಅಧಿಕಾರಿಗಳು ಹಿಂಸೆ ನೀಡಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ನೌಕರರ ಹಿತ ಕಾಯಬೇಕು, ಅನಗತ್ಯ ಕಿರುಕುಳ ನೀಡಬಾರದು. ಆತ್ಮಹತ್ಯೆ ಯತ್ನ ಕುರಿತು ಸಮಗ್ರ ತನಿಖೆ ನಡೆಸಬೇಕು. ಇಂತಹ ಘಟನೆ ಮರುಕಳಿಸಬಾರದು ಎಂದು ವಾಯವ್ಯ ಸಾರಿಗೆ ಸಂಸ್ಥೆ ಎಂಡಿಗೆ ಮನವಿ ಸಲ್ಲಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಯ ನೌಕರರು ರಾಜ್ಯಾದ್ಯಂತ ಮುಷ್ಕರ ಹೂಡಿದಾಗ ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಈ ಬೇಡಿಕೆಗಳನ್ನು ಏಕೆ ಈಡೇರಿಸಲು ಆಗುವುದಿಲ್ಲ? ಎಂದು ಪ್ರಶ್ನಿಸಿ ಅಧಿಕಾರಕ್ಕೆ ಬಂದರೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಈಗ ನೌಕರರ ವೇತನ ಪರಿಷ್ಕರಣೆ ಮಾಡಲು ಚೌಕಾಶಿ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಸಿಎಂ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಬಜೆಟ್ ನಲ್ಲಿ ಘೋಷಣೆ ಆಗದೇ ಹೋದರೆ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಎಚ್ಚರಿಸಿದರು.
ರೈತ ಸಂಘದಿಂದ ಮನವಿ:
ದೆಹಲಿಯಲ್ಲಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನೇತೃತ್ವ ವಹಿಸಿರುವ ಜಗದೀಪಸಿಂಗ್ ಎನ್ನುವವರ ಆರೋಗ್ಯ ಹದಗೆಟ್ಟಿದೆ. ಆದರೆ, ಪ್ರಧಾನಿ ಮೋದಿ ಅವರು ಇವರ ಬೇಡಿಕೆ ಮರೆಮಾಚಿ ಗೊಬ್ಬರದ ಸಬ್ಸಿಡಿ, ಪ್ರೋತ್ಸಾಹ ಧನ ಮುಂತಾದವುಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇದ್ಯಾವುದೂ ನಮಗೆ ಬೇಡ. ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯನ್ನು ಶಾಸನಬದ್ಧ ಮಾಡಬೇಕು ಎಂದರು‌.
ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಜ. 13ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಚಂದ್ರಶೇಖರ ಅವರು ತಿಳಿಸಿದರು.
ಸೇನೆ ರಾಜ್ಯಾಧ್ಯಕ್ಷ ಯೋಗೇಶ ಸಿ.ಎಚ್., ಡಿ.ಡಿ. ಗುಡಿಮನಿ, ಅರುಣಕುಮಾರ, ಕಲ್ಮಶ ಲಿಗಾಡೆ, ಬಿ.ಬಿ. ಬಸವರಾಜ ಇದ್ದರು.


Spread the love

About Karnataka Junction

[ajax_load_more]

Check Also

ಅಂದಾನಿಮಠ ನಿಧನಕ್ಕೆ ಕೆಪಿಸಿಸಿ(ಐ) ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಲ್ ಹಾಜ್ ಸಿ ಎಸ್ ಮೆಹಬೂಬ್ ಬಾಷಾರವರು ಸಂತಾಪ

Spread the loveಹುಬ್ಬಳ್ಳಿ: ಉತ್ತರ ಕರ್ನಾಟಕದ ಹಿರಿಯ ನ್ಯಾಯವಾದಿಗಳು, ಹಾಗೂ ಹುಬ್ಬಳ್ಳಿಯ ಖ್ಯಾತ ಹಿರಿಯ ವಕೀಲರಾದ ಜಿ. ಆರ್ .ಅಂದಾನಿಮಠ …

Leave a Reply

error: Content is protected !!