Breaking News

ಮತ್ತೆ ಗರಿಗೆದರಿದ ವ್ಯಾಪಾರ, ವಹಿವಾಟು

Spread the love

ಹುಬ್ಬಳ್ಳಿ: ಲಾಕ್‌ಡೌನ್‌ ಸಡಿಲಿಕೆಯಾಗುತ್ತಿದ್ದಂತೆ ವಾಣಿಜ್ಯ ನಗರಿಯಲ್ಲಿ ಮತ್ತೆ ವ್ಯಾಪಾರ ವಹಿವಾಟು ಗರಿಗೆದರಿವೆ. ವಾಣಿಜ್ಯ ಮಳಿಗೆಗಳು, ಮಾಲ್‌ಗಳು, ಹೋಟೆಲ್‌ಗಳು, ಬಟ್ಟೆ ಅಂಗಡಿಗಳು, ಬಾರ್‌–ರೆಸ್ಟೊರೆಂಟ್‌ಗಳು ಬಾಗಿಲು ತೆರೆದು ವ್ಯಾಪಾರ ಆರಂಭಿಸಿವೆ.
ಲಾಕ್‌ಡೌನ್‌ನಿಂದಾಗಿ ವ್ಯಾಪಾರ ವಹಿವಾಟಿನ ಕೇಂದ್ರವಾದ ಹುಬ್ಬಳ್ಳಿಯಲ್ಲಿ ವ್ಯಾಪಾರ ಸಂಪೂರ್ಣ ಸ್ತಬ್ಧವಾಗಿತ್ತು. ಲಾಕ್‌ಡೌನ್‌ ಸಡಿಲವಾಗುತ್ತಿದ್ದಂತೆ ವಾಣಿಜ್ಯ ನಗರಿಯಲ್ಲಿ ವಹಿವಾಟು ಜೋರಾಗಿರುವುದು ಕಂಡು ಬಂತು. ಖಾಸಗಿ ಸಂಸ್ಥೆಗಳ ಉದ್ಯೋಗಿಗಳು, ವ್ಯಾಪಾರಸ್ಥರು ಹೊರಬಿದ್ದರು. ಖರೀದಿಗಾಗಿ ಜನರೂ ಧಾವಿಸಿದರು. ಇದರಿಂದ ಮಾರುಕಟ್ಟೆ ಪ್ರದೇಶದಲ್ಲಿ ಅಂತರ ಕಾಪಾಡಿಕೊಂ ಡುರುವುದು ಕಂಡು ಬರಲಿಲ್ಲ.
ದುರ್ಗದ ಬೈಲ್‌, ದಾಜೀಬಾನ ಪೇಟೆ, ಸಿಬಿಟಿ, ಸ್ಟೇಷನ್‌ ರಸ್ತೆ ಸೇರಿದಂತೆ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿನ ಅಂಗಡಿಗಳು ತೆರೆದಿದ್ದವು. ಕೆಲವೆಡೆ ಅಂಗಡಿಗಳನ್ನು ಶುಚಿಗೊಳಿಸುತ್ತಿದ್ದ ದೃಶ್ಯಗಳು ಕಂಡು ಬಂದವು.
ಬಸ್‌ಲ್ಲಿ ಶೇ 50 ರಷ್ಟು ಮಂದಿಗೆ ಪ್ರಯಾಣಿಸಲು ಅವಕಾಶ ನೀಡಿದ್ದರಿಂದ, ಸಿಬಿಟಿ, ಹೊಸೂರು ಪ್ರಾದೇಶಿಕ ಬಸ್‌ ನಿಲ್ದಾಣ, ಗೋಕುಲ ರಸ್ತೆ ಹೊಸ ಬಸ್‌ ನಿಲ್ದಾಣಗಳಲ್ಲಿ ವಿವಿಧೆಡೆ ತೆರಳು ಪ್ರಯಾಣಿಕರು ಜಮಾಯಿಸಿದ್ದರು. ಹಳೇ ಬಸ್‌ ನಿಲ್ದಾಣದಿಂದ ಧಾರವಾಡ–ಹುಬ್ಬಳ್ಳಿ ನಡುವಿನ ಬಸ್‌ಗಳು ಸಂಚರಿಸಿದವು. ಬೆಂಗಳೂರು, ಚಿತ್ರದುರ್ಗ, ದಾವಣಗೆರೆಗೆ ತೆರಳುವ ಬಸ್‌ಗಳೂ ಇಲ್ಲಿಂದಲೇ ಹೊರಟವು. ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದ ಕಾರಣ ಬಸ್‌ಗಳ ಸಂಖ್ಯೆಯೂ ಕಡಿಮೆ ಇತ್ತು.
ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ರಸ್ತೆಗೆ ಇಳಿದಿದ್ದರಿಂದ ಪ್ರಮುಖ ಸಿಗ್ನಲ್‌ಗಳಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಲಾಕ್‌ಡೌನ್‌ ಪೂರ್ವದ ಸನ್ನಿವೇಶ ಕಂಡು ಬಂತು. ಕೋರ್ಟ್‌ ರಸ್ತೆ ಸಾಯಿಬಾಬಾ ಮಂದಿರದ ಎದುರು ಮಲ್ಟಿ ಕಾರ್‌ ಪಾರ್ಕಿಂಗ್‌ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ಮಾರ್ಗ ಬಂದ್‌ ಮಾಡಲಾಗಿದೆ. ಅದರಿಂದ ಚನ್ನಮ್ಮ ವೃತ್ತದಲ್ಲಿ ವಿಪರೀತ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಸಂಚಾರ ಸುವ್ಯವಸ್ಥೆಗೆ ಬೆಳಿಗ್ಗೆಯಿಂದ ಸಂಜೆವರೆಗೂ ಪೊಲೀಸರು ಹರಸಾಹಸಪಟ್ಟರು.


Spread the love

About Karnataka Junction

[ajax_load_more]

Check Also

ಮಳೆ ಹಾನಿ ಪರಿಹಾರ ನೀಡಲು ಸರ್ಕಾರ ಸದಾ ಸಿದ್ದ ಏನ್ ಹೆಚ್ ಕೋನರಡ್ಡಿ

Spread the love ಹುಬ್ಬಳ್ಳಿ; ವಾಯುಭಾರ ಕುಸಿತದಿಂದ ಸುರಿದ ಭಾರಿ ಮಳೆಗೆ ರೈತರು ಬೆಳೆದ ಬೆಳೆ, ರಸ್ತೆ ಹಾಗೂ ಸೇತುವೆಗಳು …

Leave a Reply

error: Content is protected !!