ಹುಬ್ಬಳ್ಳಿ: ಕೊರೊನಾ ಲಾಕ್ಡೌನ್ನಿಂದ ಜನ ಜೀವನ ಅಸ್ತವಸ್ತ್ಯವಾಗಿ ಊಟಕ್ಕೂ ಪರದಾಡುತ್ತಿದ್ದಾರೆ. ಈ ನಡುವೆ ವಾಣಿಜ್ಯ ನಗರಿ, ಚೋಟಾ ಮುಂಬೈ ಎನಿಸಿಕೊಳ್ಳುವ ಹುಬ್ಬಳ್ಳಿಯಲ್ಲಿ ಮಾತ್ರ ಸದ್ದಿಲ್ಲದೇ ಇಸ್ಪೀಟು, ಮಟ್ಕಾ ದಂಧೆ ಶುರುವಾಗಿದೆ. ಲಾಕ್ಡೌನ್ ಬಂಡವಾಳವಾಗಿಸಿಕೊಂಡಿರುವ ದಂಧೆಕೋರರು ಇದೀಗ ನಗರದಲ್ಲಿ ಕದ್ದುಮುಚ್ಚಿ ತಮ್ಮ ಆಟ ಶುರು ಮಾಡಿಕೊಂಡಿದ್ದಾರೆ.
ಹುಬ್ಬಳ್ಳಿ – ಧಾರವಾಡ ನಗರಗಳಲ್ಲಿ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಮಟ್ಕಾ ದಂಧೆ ಎಗ್ಗಿಲ್ಲದೇ ನಿರಂತರವಾಗಿ ನಡೆಯುತ್ತಿದೆ. ಈಗಾಗಲೇ ಹು – ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲೇ 116 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಈ ಸಂಬಂಧ ನೂರಾರು ಜನರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಕಮಿಷನರ್ ಲಾಭುರಾಮ್
ಹು-ಧಾ ಕಮಿಷನರೇಟ್ ವ್ಯಾಪ್ತಿಯಲ್ಲೇ 116 ಪ್ರಕರಣಗಳು ದಾಖಲು
ಹು-ಧಾ ಕಮಿಷನರೇಟ್ ವ್ಯಪ್ತಿಯಲ್ಲೇ 116 ಪ್ರಕರಣಗಳು ದಾಖಲುಹು – ಧಾ ನಗರ ಅಷ್ಟೇ ಅಲ್ಲದೆ ಗ್ರಾಮೀಣ ಭಾಗಗಳಲ್ಲೂ ಸಹ ಬೆಟ್ಟಿಂಗ್, ಜೂಜಾಟ ದಂಧೆ ನಡೆಯುತ್ತಿದೆ. ಸದ್ಯ ಅಂತಹವರನ್ನ ಬಂಧಿಸುವಲ್ಲಿ ಪೊಲೀಸರು ನಿತ್ಯ ಶ್ರಮಿಸುತ್ತಿದ್ದರೂ ದಂಧೆಕೋರರು ಮಾತ್ರ ತಮ್ಮ ಕಾಯಕ ಮುಂದುವರೆಸಿದ್ದಾರೆ. ಕೊರೊನಾ ನಡುವೆಯೇ ಇಷ್ಟೊಂದು ಪ್ರಕರಣಗಳು ಬೆಳಕಿಗೆ ಬಂದಿರುವುದು ನಿಜಕ್ಕೂ ಆಶ್ಚರ್ಯಕರ ಸಂಗತಿಯಾಗಿದೆ.
Check Also
ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ
Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …