ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆಯ ಆಯಕ್ತೆ ಶಿಲ್ಪಾನಾಗ್ ಅವರನ್ನು
ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರೋಹಣಿ ಸಿಂಧೂರಿಯನ್ನು ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ಶಿಲ್ಪಾನಾಗ್ ಅವರಿಗೆ ಯಾವ ಹುದ್ದೆ ಅಂತಾ ತಿಳಿಸಿಲ್ಲ.
ಶುಕ್ರವಾರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಇಬ್ಬರು ಐಎಎಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಸಭೆಯ ವರದಿಯನ್ನು ಮುಖ್ಯಮಂತ್ರಿಗಳಿಗೆ ರವಿಕುಮಾರ್ ಸಲ್ಲಿಕೆ ಮಾಡಿದ್ದರು. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಈಜುಕೊಳ ನಿರ್ಮಾಣ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗಿದೆ.
