ಹು-ಧಾ ಮಹಾನಗರ ಪಾಲಿಕೆ ಚುನಾವಣೆ ನಡೆಸುವದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ: ಜಗದೀಶ್ ಶೆಟ್ಟರ್

Spread the love

https://youtu.be/uBqtDe9zX3c

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವದು ಬಿಡುವದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ಆರು ತಿಂಗಳು ಯಾವುದೇ ಚುನಾವಣೆ ನಡೆಸದಂತೆ ಸಂಪುಟಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಸಭೆಯ‌ ನಿರ್ಧಾರವನ್ನ ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಪ್ರವಾಹ, ಬರ ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ಮುಂದೂಡಲು ಅವಕಾಶವಿದೆ. ನ್ಯಾಯಾಲಯದ ಗಮನಕ್ಕೆ ಈ ವಿಷಯ ತಂದ್ರೆ ಅದನ್ನ ನ್ಯಾಯಾಲಯ ಪರಿಗಣಿಸುವ ವಿಶ್ವಾಸವಿದೆ ಎಂದರು.
ಕೋವಿಡ್ ತಡೆಗಟ್ಟಲು ಪರಿಣಾಮಕಾರಿ ಕೆಲಸ ಮಾಡಿದ್ದಕ್ಕೆ ಈಗ ಕೋವಿಡ್ ಕಂಟ್ರೋಲ್‌ ಗೆ ಬರುತ್ತಿದೆ.
ಅನ್ ಲಾಕ್ ಮಾಡಿದ್ದಕ್ಕೆ ಜನರು ಮೈ ಮರೆಯಬಾರದು.
ಸರಕಾರದ ಜೊತೆಗೆ ಜನರ ಸಹಭಾಗಿತ್ವ ಇದ್ರೆ ಮಾತ್ರ ಕೋವಿಡ್ ಸಂಪೂರ್ಣವಾಗಿ ಹಿಮ್ಮೆಟ್ಟಿಸಲು ಸಾಧ್ಯ ಎಂದರು
ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಕಾರ್ಯಾರಂಭ ಮಾಡಿದ್ರೆ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ನಾವು ಕೂಡ ಕಂಪನಿ ಮುಖ್ಯಸ್ಥರ ಜೊತೆ ಮಾತುಕತೆ ಮಾಡಿದ್ದೇವೆ. ಇಲ್ಲಿ ಕಂಪನಿ ಕಾರ್ಯಾರಂಭಕ್ಕೆ ಯಾವುದೇ ಅಡತಡೆಗಳಿಲ್ಲ. ಎಲ್ಲಾ ಮೂಲಭೂತ ಸೌಲಭ್ಯ ಒದಗಿಸಲಿದ್ದೇವೆ ಎಂದರು.


Spread the love

About gcsteam

    Check Also

    10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ

    Spread the loveಬೆಂಗಳೂರು: 10ನೇ ತರಗತಿ ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ಊಹಾಪೋಹಕ್ಕೆ …

    Leave a Reply