Breaking News

ಹುಬ್ಬಳ್ಳಿ ಧಾರವಾಡ ಮಹಾನಗರ ಮಾದರಿಯನ್ನಾಗಿಸುತ್ತೇವೆ- ರೋಮಿ ಭಾಟಿ

Spread the love

ಹುಬ್ಬಳ್ಳಿ: ದೆಹಲಿ ಮಾದರಿಯಲ್ಲಿ ಕರ್ನಾಟಕದಲ್ಲೂ ಭ್ರಷ್ಟಾಚಾರ ನಿರ್ಮೂಲನೆ ಮಾಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ದೆಹಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರೊಮಿ ಭಾಟಿ ಹೇಳಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ
ಚುನಾವಣೆಗೆ ಸ್ಪರ್ಧಿಸಲು ಪೂರ್ವ ತಯಾರಿಗಾಗಿ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಕಳೆದ ಆರು ವರ್ಷಗಳ ಹಿಂದೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ನಮ್ಮ ಪಕ್ಷ, ಆರೋಗ್ಯ, ಮೂಲಸೌಕರ್ಯ, ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯನ್ನು ತಂದಿದೆ. ಆಡಳಿತದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ನಮ್ಮ ಗುರಿಯನ್ನು ಸಾಧಿಸಿದ್ದೇವೆ. ತೆರಿಗೆ ವ್ಯವಸ್ಥೆಯನ್ನು ಸರಳೀಕರಣ ಮಾಡಿ, ಎಲ್ಲಿಯೂ ಆದಾಯ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈ ಮೂಲಕ ರಾಜ್ಯದ ಬೊಕ್ಕಸಕ್ಕೆ ಆದಾಯ ಸರಾಗವಾಗಿ ಹರಿದುಬರುತ್ತಿದೆ ಎಂದರು.ದೇಶವನ್ನು ರಕ್ಷಣೆ ಮಾಡುವುದು ನಮ್ಮ ಮೂಲ ಧ್ಯೇಯವಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿನ ಸ್ಥಳೀಯ ಸಂಸ್ಥೆ ಚುನಾವಣೆಗಳು ನಮ್ಮ ಮುಂದಿವೆ. ಬೂತ್​ ಮಟ್ಟದಲ್ಲಿ ಜನಸಾಮಾನ್ಯರ ಬಳಿಗೆ ಹೋಗಬೇಕು. 6 ವರ್ಷಗಳಲ್ಲಿ ಆಪ್ ದೆಹಲಿಯಲ್ಲಿ ಸಾಕಷ್ಟು ಬದಲಾವಣೆ ತಂದಿದೆ. ಇದೇ ಮಾದರಿಯನ್ನು ಮುಂದಿಟ್ಟುಕೊಂಡು ಪಾಲಿಕೆಯ ವ್ಯಾಪ್ತಿಯಲ್ಲಿ ಸ್ಥಳೀಯ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರವನ್ನು ಸೂಚಿಸುವಂತಹ ಕಾರ್ಯಸೂಚಿಯೊಂದಿಗೆ ಮತದಾರರ ಬಳಿಗೆ ಹೋಗಬೇಕೆಂದು ನಮ್ಮ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.
ಪಕ್ಷದ ಧಾರವಾಡ ಜಿಲ್ಲಾ ಸಂಚಾಲಕ ಸಂತೋಷ ನರಗುಂದ ಮಾತನಾಡಿ, ಪಕ್ಷದ ಚುನಾವಣಾ ತಯಾರಿ ಕುರಿತು ಮಾಹಿತಿ ನೀಡಿದ ಅವರು, ಮುಂದಿನ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಅವಳಿನಗರವನ್ನು ವಿಶ್ವ ದರ್ಜೆಗೆ ಏರಿಸುವತ್ತ ಅಭಿವೃದ್ಧಿಯತ್ತ ಮಾಡಲು ಶ್ರಮಿಸುವುದಾಗಿ ಹೇಳಿದರು.
ರಾಜ್ಯ ಸಂಚಾಲಕ ಪೃಥ್ವಿ ರೆಡ್ಟಿ, ರಾಜ್ಯ ಸಹ ಸಂಚಾಲಕರಾದ ಶಾಂತಲಾ ದಾಮ್ಲೆ,
ರಾಜ್ಯ ಮಾಧ್ಯಮ ಸಂಯೋಜಕರಾದ ಸಂತೋಷ ಮುದಿಗೌಡರ, ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ ಜೈನ್ ಮುಂತಾದವರಿದ್ದರು.


Spread the love

About gcsteam

    Check Also

    ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರಿಂದ ನಾಳೆ ಐಐಟಿಯಲ್ಲಿನ ಜ್ಞಾನ ಸಂಪನ್ಮೂಲ ಮತ್ತು ದತ್ತಾಂಶ ಕೇಂದ್ರ ಉದ್ಘಾಟನೆ

    Spread the loveಧಾರವಾಡ ಫೆ.29: ಭಾರತದ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್‌ಕರ್ ಅವರು ನಾಳೆ ಮಾರ್ಚ್ 1, …

    Leave a Reply